ಮಂಗಳೂರು: ಕಟೀಲು ದುರ್ಗ ಪರಮೇಶ್ವರಿ ಬಗ್ಗೆ ಅಶ್ಲೀಲ ಪದ ಬಳಕೆ, ದೂರು ದಾಖಲು
ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ..

ಮಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಸಂಬಂಧ ಬಂಟ್ವಾಳ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಬಿ ಸಿ ರಸ್ತೆಯ ಜಬ್ಬಾರ್ ಎಂಬಾತ ಈ ಪೋಸ್ಟ್ ಹಾಕಿದ್ದು, ಆತನ ವಿರುದ್ಧ ಕೇಸು ದಾಖಲಿಸಲಾಗಿದೆ. ಹಿಂದೂಗಳನ್ನು ಪ್ರಚೋದಿಸುವ ರೀತಿಯ ಪೋಸ್ಟ್ ಗಳಿದ್ದು. ಐಪಿಸಿ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಟೀಲು ದುರ್ಗಾ ಪರಮೇಶ್ವರಿ ಬಗ್ಗೆ ಆರೋಪಿ ಅಶ್ಲೀಲ ಭಾಷೆ ಬಳಸಿದ್ದು, ಉಲ್ಲಾಳದ ಕರಾವಳಿ ಸಾಂಸ್ಕೃತಿಕ ಪರಿಷತ್ ಈ ಸಂಬಂಧ ಪೊಲೀಸರಿಗೆ ಮನವಿ ಸಲ್ಲಿಸಿದೆ.
ಇದುವರೆಗೂ ಆರೋಪಿಯವನ್ನು ಬಂಧಿಸಿಲ್ಲ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತ ಅವಹೇಳನಕಾರಿ ಪೋಸ್ಟ್ ಹಾಕಿರುವ ಅರೋಪಿಯನ್ನು ಬಂಧಿಸಬೇಕೆಂದು ಕರಾವಳಿ ಸಾಂಸ್ಕೃತಿಕ ಪರಿಷತ್ ಪೊಲೀಸರನ್ನು ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


