82ನೇ ಕನ್ನಡ ಸಾಹಿತ್ಯ ಸಮ್ಮೇಳನ ಧ್ವಜಾರೋಹಣ ಮುಕ್ತಾಯ: ಉದ್ಘಾಟನೆಗೆ ಕ್ಷಣಗಣನೆ
82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ...

Published On :
ರಾಯಚೂರು: 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಕನ್ನಡದ ತೇರು ಎಳೆಯಲು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಸಜ್ಜಾಗಿದ್ದಾರೆ.ಇಂದು ಬೆಳಗ್ಗೆ 11 ಗಂಟೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆರಂಭವಾಗುವ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಈಗಾಗಲೇ ಸಮ್ಮೇಳನದ ಪ್ರಧಾನ ವೇದಿಕೆಯ ಮುಂಭಾಗದಲ್ಲಿ ಧ್ವಜಾರೋಹಣ ಮುಕ್ತಾಯಗೊಂಡಿತು. ಇದೀಗ ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಭವ್ಯ ಮೆರವಣಿಗೆ ನಗರದ ಕರ್ನಾಟಕ ಸಂಘದಿಂದ ಆರಂಭಗೊಂಡಿದೆ.
ಆರು ದಶಕಗಳ ನಂತರ ರಾಯಚೂರಿನಲ್ಲಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಹಜವಾಗಿ ಇಲ್ಲಿನ ಸಾಹಿತ್ಯಾಭಿಮಾನಿಗಳಲ್ಲಿ ಸಂತೋಷ, ಉತ್ಸಾಹ ಮೂಡಿಸಿದೆ.1955ರಲ್ಲಿ ಆದ್ಯ ರಂಗಾಚಾರ್ಯರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆದಿತ್ತು.
ಇಂದು ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ, ಸಮ್ಮೇಳನಾಧ್ಯಕ್ಷ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಲಿದ್ದಾರೆ.
ಇಂದು, ನಾಳೆ, ನಾಡಿದ್ದು ಮೂರು ದಿನಗಳ ಕಾಲ ಕನ್ನಡ ಸಾಹಿತ್ಯದ ಜಾತ್ರೆ ಜರುಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕನ್ನಡ ಸಾಹಿತ್ಯ ಸಮ್ಮೇಳನRaichurರಾಯಚೂರುKannada sahithya sammelanaDr.Baraguru Ramachandrappaಡಾ.ಬರಗೂರು ರಾಮಚಂದ್ರಪ್ಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


