ಬೆಂಗಳೂರು: ಜಯನಗರದ ವಿನಾಯಕ ದೇವಾಲಯ ಸರ್ಕಾರದ ವಶಕ್ಕೆ; ಮೇಲ್ಮನವಿ ವಜಾ
ಜಯನಗರ 4ನೇ ಬ್ಲಾಕ್ ನಲ್ಲಿರುವ ವಿನಾಯಕ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯುವ ದಿಸೆಯಲ್ಲಿ...

ಬೆಂಗಳೂರು: ಜಯನಗರ 4ನೇ ಬ್ಲಾಕ್ ನಲ್ಲಿರುವ ವಿನಾಯಕ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯುವ ದಿಸೆಯಲ್ಲಿ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ಎತ್ತಿ ಹಿಡಿದಿದೆ.
ಈ ಸಂಬಂಧ ವಿನಾಯಕ ಸೇವಾ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ.
ದೇವಾಲಯದ ಆಡಳಿತ ಮಂಡಳಿ ತನ್ನ ಆದಾಯ ಮತ್ತು ಖರ್ಚಿನ ಲೆಕ್ಕ ಪತ್ರಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ 2014 ರ ಜನವರಿ 2 ರಂದು ಆಡಳಿತಾಧಿಕಾರಿ ನೇಮಕ ಮಾಡಿತ್ತು.
ಇದನ್ನು ದೇವಾಲಯದ ಸೇವಾ ಸಮಿತಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಸರ್ಕಾರದ ಕ್ರಮವನ್ನು ಮಾನ್ಯ ಮಾಡಿದ್ದ ಏಕ ಸದಸ್ಯ ಪೀಠವು ಆಡಳಿತಾಧಿಕಾರಿ ನೇಮಕ ಸರಿಯಾಗಿದೆ ಎಂದು ಅಭಿಪ್ರಾಯ ಪಟ್ಟಿತ್ತು. ಆಡಳಿತ ಮಂಡಳಿ ವಿರುದ್ಧದ ಆರೋಪಗಳ ಬಗ್ಗೆ ಸೂಕ್ತ ತನಿಖೆ ನಡೆಸುವಂತೆಯೂ ಆದೇಶಿಸಿತ್ತು.
ಈ ಕುರಿತ ತನಿಖೆಯ ಆಧಾರದ ಮೇಲೆ ಸರ್ಕಾರ ದೇವಾಲಯವನ್ನು 2016 ರ ಆಗಸ್ಟ್ ತಿಂಗಳಿನಲ್ಲಿತನ್ನ ವಶಕ್ಕೆ ಪಡೆಯುವ ಸಂಬಂಧ ಅಧಿಸೂಚನೆ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


