ವರದಕ್ಷಿಣೆ ಕಿರುಕುಳ: ದುನಿಯಾ ವಿಜಿ ಪತ್ನಿ ನಾಗರತ್ನ ಸೇರಿ 11 ಮಂದಿ ವಿರುದ್ಧ ಎಫ್ಐಆರ್ ದಾಖಲು
ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಸೇರಿದಂತೆ 11 ಮಂದಿ...

Published On :
ಬೆಂಗಳೂರು: ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಸೇರಿದಂತೆ 11 ಮಂದಿ ಸಂಬಂಧಿಕರ ವಿರುದ್ಧ ಶನಿವಾರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ನಾಗರತ್ನ ಅವರ ತಮ್ಮ ಕೃಷ್ಣಮೂರ್ತಿಯ ಪತ್ನಿ ಮೀನಾಕ್ಷಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಇದಕ್ಕೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಜಿ ಪತ್ನಿ ನಾಗರತ್ನ, ಅವರ ತಂದೆ ರುದ್ರಪ್ಪ, ತಾಯಿ ಯಶೋದಮ್ಮ, ನಾಗರತ್ನ ಸಹೋದರಿಯರಾದ ಶಶಿಕಲಾ, ರಾಧಮ್ಮ ಸೇರಿದಂತೆ 11 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ ಎಂದು ಆನೇಕಲ್ ಪೊಲೀಸರು ತಿಳಿಸಿದ್ದಾರೆ.
ಇಂಡ್ಲವಾಡಿ ಗ್ರಾಮದಲ್ಲಿ ನಾಗರತ್ನ ತಮ್ಮ ಕೃಷ್ಣಮೂರ್ತಿ ಪತ್ನಿ ಮೀನಾಕ್ಷಿ (25) ವರದಕ್ಷಿಣೆ ಕಿರುಕುಳದಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಬೊಮ್ಮಸಂದ್ರ ನಾರಯಾಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೀನಾಕ್ಷಿ ಸ್ಥಿತಿ ಈಗ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು ಆಕೆಯ ಪೋಷಕರು ಪೊಲೀಸರಿಗೆ ಕಿರುಕುಳ ನೀಡಿದ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


