ರಾಜ್ಯ

ರಾಮನಗರದಲ್ಲಿ ಬಸ್‌ಗೆ ಬೆಂಕಿ, 40 ವಿದ್ಯಾರ್ಥಿಗಳು ಪವಾಡಸದೃಶ ಪಾರು

ರಾಮನಗರ ಸಮೀಪ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸೊಂದು...

ರಾಮನಗರದಲ್ಲಿ ಬಸ್‌ಗೆ ಬೆಂಕಿ, 40 ವಿದ್ಯಾರ್ಥಿಗಳು ಪವಾಡಸದೃಶ ಪಾರು
ಹೊತ್ತಿ ಉರಿಯುತ್ತಿರುವ ಬಸ್
Published On :
ಬೆಂಗಳೂರು: ರಾಮನಗರ ಸಮೀಪ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸೊಂದು ಇದ್ದಕ್ಕಿದ್ದಂತೆ ಹೊತ್ತಿ ಉರಿದಿದ್ದು, ಅದೃಷ್ಟವಷಾತ್‌ ಬಸ್‌ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದ ಜಾಲಹಳ್ಳಿಯ ಬಿಇಎಲ್ ಶಾಲೆಯ 40 ವಿದ್ಯಾರ್ಥಿಗಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದ್ದು, ಆರು ಬಸ್ ಗಳಲ್ಲಿ ಬಿಇಎಲ್ ಶಾಯೆ ವಿದ್ಯಾರ್ಥಿಗಳನ್ನು ಒಂದು ದಿನದ ಪ್ರವಾಸಕ್ಕಾಗಿ ಶ್ರೀರಂಗಪಟ್ಟಣಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮದುಗೆರೆ ಬಳಿ ತಾಂತ್ರಿಕ ದೋಷದಿಂದ ಒಂದು ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್‌ ನಿಲ್ಲಿಸಿ ಮಕ್ಕಳನ್ನು ಕೆಳಗಿಳಿಸಿದ್ದುದರಿಂದ ಭಾರಿ ಅನಾಹುತ ತಪ್ಪಿದೆ. 
ಅಗ್ನಿ ಶಾಮಕ ಸಿಬಂದಿ ಸ್ಥಳಕ್ಕಾಗಮಿಸುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಬಸ್‌ ಸಂಪೂರ್ಣ ಭಸ್ಮವಾಗಿತ್ತು. ಅವಘಡ ಸಂಭವಿಸಿದ ಬಸ್‌ನಲ್ಲಿ ಸುಮಾರು 40 ಹೈಸ್ಕೂಲ್‌ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. 
ಅವಘಡದಿಂದಾಗಿ ಹೆದ್ದಾರಿಯಲ್ಲಿ 5 ಕೀ.ಮೀಗೂ ಹೆಚ್ಚು ದೂರದವರೆಗೆ ಟ್ರಾಫಿಕ್‌ ಜಾಮ್‌ ಆಗಿದ್ದ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.