ಜಯಾಗೆ ಅನಾರೋಗ್ಯ: ರಾಜ್ಯದಲ್ಲೂ ಕಟ್ಟೆಚ್ಚರ, ಗಡಿ ಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬೆಂಗಳೂರು: ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಹೃದಯಾಘಾತವಾದ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪ್ರಮುಖವಾಗಿ ತಮಿಳುನಾಡು ಗಡಿ ಸಮೀಪದ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರಿನಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಮುಖವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರಿನ ಅತ್ತಿಬೆಲೆ ಹಾಗೂ ಅನೇಕಲ್ ನಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಅತ್ತಿಬೆಲೆ ಮತ್ತು ಆನೇಕಲ್ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ.
ನಿನ್ನೆ ರಾತ್ರಿ ರಾಜ್ಯದ ಕೆಎಸ್ ಆರ್ ಟಿಸಿ ಬಸ್ ಮೇಲೆ ತಿರುವಣ್ಣಾಮಲೈನಲ್ಲಿ ದಾಳಿ ನಡೆದ ಬಳಿಕ ರಾಜ್ಯದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬಸ್ ಗಳ ಸಂಚಾರ ಸ್ಥಗಿತವಾಗಿದ್ದು, ತಮಿಳುನಾಡಿನಲ್ಲಿ ಚೆನ್ನೈಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಹುತೇಕ ಮುಚ್ಚಲಾಗಿದೆ. ಹೀಗಾಗಿ ಅತ್ತಿಬೆಲೆಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದು, ಗೂಡ್ಸ್ ವಾಹನಗಳು ಮತ್ತು ಖಾಸಗಿ ವಾಹನಗಳ ಮಾತ್ರ ವಿರಳ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿವೆ.
ಬೆಂಗಳೂರಿನಲ್ಲೂ ಕಟ್ಟೆಚ್ಚರ
ಅತ್ತ ಜಯಾಗೆ ಹೃದಯಾಘಾತ ವಿಚಾರ ತಿಳಿಯುತ್ತಿದ್ದಂತೆಯ ಚೆನ್ನೈನ ಆಪೋಲೋ ಆಸ್ಪತ್ರೆಯತ್ತ ಅಭಿಮಾನಿಗಳು ಧಾವಿಸುತ್ತಿದ್ದಂತೆಯೇ, ಇತ್ತ ಬೆಂಗಳೂರಿನಲ್ಲೂ ಅವರ ಅಭಿಮಾನಿಗಳು ಕಂಗಾಲಾಗಿದ್ದರೆ. ನಗರ ಶ್ರೀರಾಂಪುರದಲ್ಲಿರುವ ತಮಿಳು ನಿವಾಸಿಗಳು ಜಯಲಿಲಿತಾ ಚೇತರಿಸಿಕೊಳ್ಳಲಿ ಎಂದು ರಾತ್ರಿಯಿಂದಲೇ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ್ದಾರೆ. ಇನ್ನು ಜಯಲಲಿತಾ ಅವರಿಗೆ ಹೃದಯಾಘಾತವಾದಗ ಹಿನ್ನಲೆಯಲ್ಲಿ ನಗರದಲ್ಲಿ ತಮಿಳುನಿವಾಗಳು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಮುಖವಾಗಿ ನಗರದ ಶ್ರೀರಾಂಪುರ, ಓಕಳಿಪುರಂ ಮತ್ತು ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ತಮಿಳು ನಿವಾಸಿಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ವ್ಯಾಪಕ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


