ಜಯಲಲಿತಾ ನಿಧನಕ್ಕೆ ಕರ್ನಾಟಕ ರಾಜಕೀಯ ನಾಯಕರ ಸಂತಾಪದ ನುಡಿಗಳು
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನ ಹಿನ್ನೆಲೆ ಕರ್ನಾಟಕ ರಾಜ್ಯ ನಾಯಕರು ಕಂಬನಿ ಮಿಡಿದಿದ್ದಾರೆ...
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನ ಹಿನ್ನೆಲೆ ಕರ್ನಾಟಕ ರಾಜ್ಯ ನಾಯಕರು ಕಂಬನಿ ಮಿಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಬಿಎಸ್ ಯಡಿಯೂರಪ್ಪ ಮತ್ತು ಶೋಭ ಕರಂದ್ಲಾಜೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಅತಿ ದೊಡ್ಡ ಅಘಾತ, ಜಯಲಲಿತಾ ಅವರು ಬಡವರ ಪರವಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಆಕೆಯ ನೆನಪಿಗಾಗಿ ಅವುಗಳನ್ನು ಮುಂದುವರಿಸಬೇಕಾಗಿದೆ. ತಮಿಳುನಾಡಿಗೆ ಅತಿ ದೊಡ್ಡ ಆಘಾತ, ಜಯಲಲಿತಾ ಅವರು ಬಡವರ ಪರವಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಆಕೆಯ ನೆನಪಿಗಾಗಿ ಅವುಗಳನ್ನು ಮುಂದುವರಿಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜಯಲಲಿತಾ ಸಾವು ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಜಯಲಲಿತಾ ಅವರು ಧೀಮಂತ ಜೀವನವನ್ನು ನಡೆಸಿದವರು, ರಾಜಕೀಯವಾಗಿ ಮತ್ತು ಚಿತ್ರರಂಗದ ಹಾದಿಯಲ್ಲಿ ಅನೇಕ ಕಷ್ಟಗಳನ್ನು ಕಂಡವರು. ಅವರ ನಾಯಕತ್ವದಲ್ಲಿ ತಮಿಳುನಾಡು ಅಭಿವೃದ್ಧಿಯನ್ನು ಪಡೆದಿದೆ. ಅವರ ಸಾವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ತಮಿಳುನಾಡಿನ ಜನತೆಗೆ ನೀಡಲಿ ಎಂದು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಜಯಲಲಿತಾ ಸಾವಿನ ಬಗ್ಗೆ ಮಾತನಾಡಿ, ಜಯಲಲಿತಾ ಅವರ ಸಾಧನೆ ಅಜರಾಮರ, ಅವರು ಇದ್ದಿದ್ದರೆ ಮುಂದೊಂದು ದಿನ ಪ್ರಧಾನಿಯಾಗುತ್ತಿದ್ದರು. ಅವರು ಕನ್ನಡದ ಮಗಳಾಗಿ ಹುಟ್ಟಿ ತಮಿಳುನಾಡನ್ನು ಆಳಿದ ಧೀರೆ, ರಾಜಕೀಯ, ಚಿತ್ರರಂಗ, ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದ್ದಾರೆ ಎಂದರು.
ಮೈಸೂರು ಕೋಮಲವಲ್ಲಿ ಆಗಿದ್ದು ತಮಿಳುನಾಡಿನ ಅಮ್ಮ, ಜಯಾ ಒಬ್ಬ ಉಕ್ಕಿನ ಮಹಿಳೆಯಾಗಿ ಕಡಿಮೆ ಅವಧಿಯಲ್ಲಿ ರಾಜಕೀಯ ಅಚ್ಚರಿಗಳನ್ನು ಸೃಷ್ಟಿಸಿದರು ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

