ರಾಜ್ಯ

ಚಿಕ್ಕರಾಯಪ್ಪ, ಜಯಚಂದ್ರ ಸಂಬಂಧಿಗಳ ಮನೆ ಮೇಲೆ ಎಸಿಬಿ ದಾಳಿ!

ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಸರ್ಕಾರಿ ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಅವರ ಸಂಬಂಧಿಕರ ಮನೆಗಳ ಮೇಲೆ ಇದೀಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಚಿಕ್ಕರಾಯಪ್ಪ, ಜಯಚಂದ್ರ ಸಂಬಂಧಿಗಳ ಮನೆ ಮೇಲೆ ಎಸಿಬಿ ದಾಳಿ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿಗೊಳಗಾಗಿದ್ದ ಸರ್ಕಾರಿ ಅಧಿಕಾರಿಗಳಾದ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಅವರ ಸಂಬಂಧಿಕರ ಮನೆಗಳ ಮೇಲೆ ಇದೀಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಂಗಳೂರು ಮತ್ತು ಕೋಲಾರದ ಒಟ್ಟು 10 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ಮಾಡಿದ್ದು, ಅಮಾನತುಗೊಂಡಿರುವ ಚಿಕ್ಕರಾಯಪ್ಪ ಹಾಗೂ ಜಯಚಂದ್ರ ನಿವಾಸ ಹಾಗೂ ಅವರ ಸಂಬಂಧಿಗಳ ನಿವಾಸದ ಮೇಲೂ ದಾಳಿ ಮಾಡಿದ್ದಾರೆ. ಕೋಲಾರದ ಕೆಜಿಎಫ್ ನಲ್ಲಿರುವ ಚಿಕ್ಕರಾಯಪ್ಪ ಅವರ ಹೆಂಡತಿ ಸಹೋದರಿಯ ಗಂಡ ಆನಂದಮೂರ್ತಿ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಚಿಕ್ಕರಾಯಪ್ಪ ಅವರ ಮನೆಯಷ್ಟೇ ಅಲ್ಲದೇ ಜಯಚಂದ್ರ ಅವರ ಡಾಲರ್ಸ್ ಕಾಲನಿಯಲ್ಲಿರುವ ಮನೆ ಸೇರಿದಂತೆ ಒಟ್ಟು 10 ಕಡೆಗಳಲ್ಲಿ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇತ್ತೀಚೆಗಷ್ಟೇ ಕೋಟ್ಯಂತರ ರು. ಅಕ್ರಮ ಸಂಪತ್ತು ಹೊಂದಿದ ಆರೋಪ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾವೇರಿ ನೀರಾವರಿ ನಿಗಮದ ಎಂಡಿ ಎನ್.ಟಿ.ಚಿಕ್ಕರಾಯಪ್ಪ ಹಾಗೂ ಜಯಚಂದ್ರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಂತರ ರುಪಾಯಿ ನಗದು, 7 ಕೆಜಿಚಿನ್ನ ಹಾಗೂ 150ಕೋಟಿ ರುಪಾಯಿಗೂ ಹೆಚ್ಚಿನ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ದಾಖಲೆಗಳು ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಕೂಡಾ ತನಿಖೆ ನಡೆಸುತ್ತಿದ್ದು, ಇದೀಗ ಎಸಿಬಿ ಅಧಿಕಾರಿಗಳು ಕೂಡ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.