ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸುವಂತೆ ಬಿಬಿಎಂಪಿ ಗೆ ಸಿಎಂ ಸೂಚನೆ
ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಮುಂದುವರಿಸುವಂತೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಆಯುಕ್ತರಿಗೆ
ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತೆ ಮುಂದುವರಿಸುವಂತೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಅನಾಹುತ ತಡೆಯಲು ಮಳೆ ನೀರು ಕಾಲುವೆ, ರಾಜಕಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿತ್ತು. ಆದರೆ ಏಕಾಏಕಿ ತೆರವು ಕಾರ್ಯಾಚರಣೆ ವೇಗ ಕಳೆದುಕೊಂಡಿದೆ. ಇದಕ್ಕೆ ಕಾರಣವೇನು ಎಂದು ಕೇಳಿದರು.
ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್ , ಸರ್ವೆಯರ್‌ಗಳು ಮಾತೃ ಇಲಾಖೆಗೆ ವಾಪಸ್ ಹೋಗಿದ್ದರಿಂದ 20 ದಿನಗಳ ಕಾಲ ಕಾರ್ಯಾಚರಣೆ ನಿಲ್ಲಿಸಬೇಕಾಯಿತು. ಸರ್ವೆಯರ್‌ಗಳನ್ನು ವಿವಿಧ ಇಲಾಖೆಗಳಿಂದ ವಾಪಸು ಕರೆಸಿಕೊಂಡಿದ್ದು, ನಾಳೆಯಿಂದಲೇ ಕಾರ್ಯಾಚರಣೆ ಆರಂಭಿಸುವುದಾಗಿ ಹೇಳಿದರು.
ನಗರೋತ್ಥಾನ ಯೋಜನೆ ಹಾಗೂ ಮುಖ್ಯಮಂತ್ರಿ ವಿಶೇಷ ನಿಧಿ ಸೇರಿ ಒಟ್ಟು 7300 ಕೋಟಿ ಅನುದಾನ ಪಾಲಿಕೆಗೆ ದೊರೆಯಲಿದೆ. ಈ ಪೈಕಿ 2016-17ನೇ ಸಾಲಿಗೆ 3208 ಕೋಟಿ ರೂ. ಹಾಗೂ 2017-18ನೇ ಸಾಲಿಗೆ 4092 ಕೋಟಿ ರೂ. ಹಂಚಿಕೆಯಾಗಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್ ಸಭೆಗೆ ಮಾಹಿತಿ ನೀಡಿದರು. , ರೆಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ನೃಪತುಂಗ, ಮೋದಿ ಆಸ್ಪತ್ರೆ ರಸ್ತೆ, ಸಿದ್ದಯ್ಯ ಪುರಾಣಿಕ್ ರಸ್ತೆ ಹಾಗೂ ಜಯನಗರ 11ನೇ ಮುಖ್ಯರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಗಾಂಧಿನಗರ, ಕಲಾಸಿಪಾಳ್ಯ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಮಲ್ಲೇಶ್ವರ ಮತ್ತು ಪ್ಯಾಲೆಸ್ ರಸ್ತೆಯ ಟೆಂಡರ್‌ಶ್ಯೂರ್ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದು ವಿವರಣೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

