ರಾಜ್ಯ

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಸಿದ್ದ ಸಾವು

ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ.

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಸಿದ್ದ ಸಾವು
ಚಿಕಿತ್ಸೆ ಪಡೆಯುತ್ತಿರುವ ಕಾಡಾನೆ ಸಿದ್ದ
Published On :
ರಾಮನಗರ: ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ. 
ಆಗಸ್ಟ್ ತಿಂಗಳಲ್ಲಿ ಬನ್ನೇರುಘಟ್ಟದಿಂದ ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವೇಳೆಯಲ್ಲಿ ಕಾಡಾನೆಯ ಕಲು ಮುರಿದಿತ್ತು. ಕಾಲು ಮುರಿದುಕೊಂಡಿದ್ದ ಕಾಡಾನೆಗೆ ರಾಮನಗರದ ಮಂಚನಬೆಲೆಯ ಬಳಿ ಕಳೆದ 2-3 ತಿಂಗಳುಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ದಿನಗಳ ಕಾಲ ಅನಾರೋಗ್ಯ ಎದುರಿಸಿದ್ದ ಕಾಡಾನೆ ಚೇತರಿಕೆ ಕಾಣುವ ಲಕ್ಷಣಗಳು ಇರಲಿಲ್ಲ. ಆದರೆ ಕಳೆದ ಕೆಲವು ದಿನಗಳ ಹಿಂದೆ ಕಾಡಾನೆ ಸಿದ್ದ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಸಿದ್ದ ಮೃತಪಟ್ಟಿದೆ. 
ಕಾಡಾನೆ ಸಿದ್ದನ ಚಿಕಿತ್ಸೆಗಾಗಿ ಸರಕಾರ ಸಮಿತಿಯೊಂದನ್ನು ರಚಿಸಿ, ವ್ಯವಸ್ಥೆ ಮಾಡಿತ್ತು. ಅರಣ್ಯ ಇಲಾಖೆಯು ವೈಲ್ಡ್ ಲೈಫ್ ಎಸ್ ಒಎಸ್ ಎಂಬ ಸಂಸ್ಥೆ ಸಹಕಾರದ ಜತೆಗೆ ಸಿದ್ದನ ಚಿಕಿತ್ಸೆ ಬಗ್ಗೆ ನಿಗಾ ವಹಿಸುತ್ತಿತ್ತು. 25-30 ವರ್ಷದ ಕಾಡಾನೆಗೆ  ಗುವಾಹಟಿ ಹಾಗೂ ಕೇರಳದ ವೈದ್ಯರು ಚಿಕಿತ್ಸೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.