ರಾಜ್ಯ

ಹುಬ್ಬಳ್ಳಿಯಲ್ಲಿ ಕ್ರೂಸರ್-ಲಾರಿ ನಡುವೆ ಭೀಕರ ಅಪಘಾತ: 6 ಸಾವು

ಗದಗ ಜಿಲ್ಲೆಯ ಕೊಣ್ಣುರ್ ಕ್ರಾಸ್ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹುಬ್ಬಳ್ಳಿ ಮಾದಿಗ ಸಮಾವೇಶಕ್ಕೆ ಹೊರಟ್ಟಿದ್ದ 6 ಮಂದಿ ...

ಹುಬ್ಬಳ್ಳಿಯಲ್ಲಿ ಕ್ರೂಸರ್-ಲಾರಿ ನಡುವೆ ಭೀಕರ ಅಪಘಾತ: 6 ಸಾವು
ಕ್ರೂಸರ್
Published On :
ಬಾಗಲಕೋಟೆ: ಗದಗ ಜಿಲ್ಲೆಯ ಕೊಣ್ಣುರ್ ಕ್ರಾಸ್ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹುಬ್ಬಳ್ಳಿ ಮಾದಿಗ ಸಮಾವೇಶಕ್ಕೆ ಹೊರಟ್ಟಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 9.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಕ್ರೂಸರ್ ನಜ್ಜುಗುಜ್ಜಾಗಿದ್ದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದು 8 ಮಂದಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವರಾದ ಬಸವರಾಜ ಮ್ಯಾಗೇರಿ, ಭೀಮಣ್ಣ ಕಳ್ಳಿಮನಿ, ಬಾಬು ಕಲ್ಯಾಣಿ, ಎಸ್ಎಸ್ ಮ್ಯಾಗೇರಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರ ತಲಾ 1 ಲಕ್ಷ ರುಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.