ರಾಜ್ಯ

ಬೆಂಗಳೂರು: ಸಂಖ್ಯಾಶಾಸ್ತ್ರಜ್ಞ, ಜ್ಯೋತಿಷಿ ಆರ್ಯವರ್ಧನ್ ಗುರೂಜಿ ವಿರುದ್ಧ ದೂರು

ಜ್ಯೋತಿಷಿ ಆರ್ಯವರ್ಧವ್ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನ...

ಬೆಂಗಳೂರು: ಸಂಖ್ಯಾಶಾಸ್ತ್ರಜ್ಞ, ಜ್ಯೋತಿಷಿ ಆರ್ಯವರ್ಧನ್ ಗುರೂಜಿ ವಿರುದ್ಧ ದೂರು
ಆರ್ಯವರ್ಧನ್ ಗುರೂಜಿ
Published On :

ಬೆಂಗಳೂರು: ಜ್ಯೋತಿಷಿ ಆರ್ಯವರ್ಧವ್ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನ ಮಹಿಳೆಯೊಬ್ಬರು ಆರ್ಯವರ್ಧನ್ ಗುರೂಜಿ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್‌ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

ಮಹಿಳೆ ನೀಡಿದ ದೂರಿನನ್ವಯ ಅತ್ಯಾಚಾರ ಯತ್ನ, ವಂಚನೆ, ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣದಡಿ ಗುರೂಜಿ ವಿರುದ್ಧ ಎಫ್‌ಐಆರ್‌  ದಾಖಲಿಸಿಕೊಳ್ಳಲಾಗಿದೆ. ಸಂಖ್ಯಾ ಜ್ಯೋತಿಷ್ಯ ತರಗತಿ ನಡೆಸುವುದಾಗಿ ಆರ್ಯವರ್ಧನ್‌ ಅವರು ಕೆಲ ಮಾಧ್ಯಮಗಳಲ್ಲಿ ಜಾಹೀರಾತು ನೀಡಿದ್ದರು. ಅದನ್ನು ನಂಬಿದ್ದ 40 ವರ್ಷದ ಮಹಿಳೆಯು ತರಗತಿಗೆ ಬಂದಿದ್ದರು ಎಂದು ವಿವರಿಸಿದರು.

ಐದು ದಿನಗಳ ತರಗತಿ ಪ್ರವೇಶಾತಿಗೆ 24 ಸಾವಿರ  ನಿಗದಿ ಮಾಡಲಾಗಿತ್ತು. ಆದರೆ, ಹೆಚ್ಚು ತರಗತಿಗಳನ್ನು ನಡೆಸುವುದಾಗಿ ಗುರೂಜಿ 1.5 ಲಕ್ಷ ಪಡೆದುಕೊಂಡಿದ್ದರು. ತಮ್ಮ ತರಬೇತಿಯಿಂದ ಉಪಯೋಗವಾಗದಿದ್ದರೇ ಹಣ ವಾಪಸ್ ಮಾಡುವುದಾಗಿ ಗುರೂಜಿ ಹೇಳಿದ್ದರು. ಕೆಲವು ತರಗತಿಗಳಿಗೆ ಹಾಜರಾಗಿದ್ದ ಆಕೆ ಅದರಿಂದ ಹೆಚ್ಚಿನ ಪ್ರಯೋಜನವಿಲ್ಲ ಎಂದು ಭಾವಿಸಿ ಹಣ ವಾಪಸ್ ನೀಡುವಂತೆ ಕೇಳಿದ್ದಳು. ಈ ಸಂಬಂಧ ಇಬ್ಬರ ನಡುವೆ ವಾಗ್ದಾಳಿ ನಡೆದಿತ್ತು.

ಆಗಸ್ಟ್ 11 ರಂದು ಮಹಿಳೆ ಮತ್ತು ಆಕೆಯ ಪತಿ ರಾಜರಾಜೇಶ್ವರಿ ನಗರದಲ್ಲಿರುವ ಆರ್ಯವರ್ಧನ್ ಅವರ ಮನೆಗೆ ತೆರಳಿ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಮಹಿಳೆಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿ , ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.