ರಾಜ್ಯ

ಹಿಂಗಾರು ಮಳೆ ವೈಫಲ್ಯದಿಂದ 10 ಸಾವಿರ ಕೋಟಿ ರೂ. ನಷ್ಟ: ಕಾಗೋಡು ತಿಮ್ಮಪ್ಪ

ಹಿಂಗಾರು ಮಳೆ ವೈಫಲ್ಯದಿಂದಾಗಿ ರಾಜ್ಯದಲ್ಲಿ ಸುಮಾರು 8 ರಿಂದ 10 ಲಕ್ಷ ಪ್ರದೇಶ ಬಿತ್ತನೆ...

ಹಿಂಗಾರು ಮಳೆ ವೈಫಲ್ಯದಿಂದ 10 ಸಾವಿರ ಕೋಟಿ ರೂ. ನಷ್ಟ: ಕಾಗೋಡು ತಿಮ್ಮಪ್ಪ
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ
Published On :
ಬೆಂಗಳೂರು: ಹಿಂಗಾರು ಮಳೆ ವೈಫಲ್ಯದಿಂದಾಗಿ ರಾಜ್ಯದಲ್ಲಿ ಸುಮಾರು 8 ರಿಂದ 10 ಲಕ್ಷ ಪ್ರದೇಶ ಬಿತ್ತನೆ ಮಾಡಿದ್ದ ಬೆಳೆ ನಷ್ಟವಾಗಿದ್ದು, ಇದರಿಂದ ಸುಮಾರು 10 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿರಬಹುದು ಎಂದು ಅಂದಾಜು ಮಾಡಲಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ನಷ್ಟದ ಪ್ರಮಾಣ ನಿಖರ ಮಾಹಿತಿ ಸಂಗ್ರಹಿಸಿದ ನಂತರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಆರ್ಥಿಕ ನೆರವಿಗಾಗಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದರು.
ಮುಂಗಾರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಸುಮಾರು 470 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮಾತನಾಡಿದ ಕಂದಾಯ ಸಚಿವರು ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದ 15 ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕೇಂದ್ರಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದರೂ, ಈ ವರ್ಷ ಈವರೆವಿಗೂ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಈ ತಿಂಗಳ ಅಂತ್ಯಕ್ಕೆ ಹಣ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದರು.
ಇಲಾಖೆಯಲ್ಲಿ 1600 ಸರ್ವೆಯರ್‍ಗಳ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ 2 ತಿಂಗಳೊಳಗೆ ಪೂರ್ಣಗೊಳಿಸುವುದಾಗಿ ತಿಳಿಸಿದ ಅವರು ಬಗರ್‍ಹುಕಂ ಸಾಗುವಳಿ ಅರ್ಜಿಗಳು 4 ಲಕ್ಷ ಇದ್ದು ಇವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.