ರಾಜ್ಯ

ವರ್ಧಾ ಚಂಡಮಾರುತ ಎಫೆಕ್ಟ್; ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ!

ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ವರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರಿನ ಮೇಲೂ ಆಗಲಿದ್ದು, ಮಧ್ಯಾಹ್ಮದ ವೇಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವರ್ಧಾ ಚಂಡಮಾರುತ ಎಫೆಕ್ಟ್; ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ವರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರಿನ ಮೇಲೂ ಆಗಲಿದ್ದು, ಮಧ್ಯಾಹ್ಮದ ವೇಳೆಗೆ ಸಿಲಿಕಾನ್ ಸಿಟಿಯ ಹಲವೆಡೆ  ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಉತ್ತರಭಾಗದಲ್ಲಿ ಮಧ್ಯಾಹ್ನದ ವೇಳೆಗೆ ಭಾರಿಯಾಗಲಿದ್ದು, ಬೆಂಗಳೂರಿನಿಂದ ತಮಿಳುನಾಡು ಸಂಪರ್ಕಿಸುವ ಆನೇಕಲ್, ಜಿಗಣಿ ಮತ್ತು ಇತರೆ ಪ್ರದೇಶಗಳಲ್ಲಿ ಭಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಕೇವಲ ಬೆಂಗಳೂರು ಮಾತ್ರವಲ್ಲದೇ ಚಂಡಮಾರತದ ಪರಿಣಾಮ ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಬೆಂಗಳೂರಿನಲ್ಲು ಸುಮಾರು 17 ಮಿ.ಮೀ ಮಳೆಯಾಗಲಿದೆ ಎಂದು ಸ್ಕೈಮೇಟ್ ಹವಾಮಾನ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.