ರಾಜ್ಯ

ನೋಟು ನಿಷೇಧದಿಂದ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಡೆತ

ಕೇಂದ್ರ ಸರ್ಕಾರ ನ.8 ರಂದು ಪ್ರಕಟಿಸಿದ್ದ 500, 1000 ರೂ ನೋಟು ನಿಷೇಧದಿಂದ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹೊಡೆತ ಬಿದ್ದಿದೆ.

ನೋಟು ನಿಷೇಧದಿಂದ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಡೆತ
ನೋಟು ನಿಷೇಧದಿಂದ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಡೆತ
Published On :
ಬೆಂಗಳೂರು: ಕೇಂದ್ರ ಸರ್ಕಾರ ನ.8 ರಂದು ಪ್ರಕಟಿಸಿದ್ದ 500, 1000 ರೂ ನೋಟು ನಿಷೇಧದಿಂದ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಹೊಡೆತ ಬಿದ್ದಿದೆ. 
ಪ್ರತಿ ವರ್ಷ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿದ್ದರು. ಆದರೆ ಪ್ರತಿ ವರ್ಷಕ್ಕಿಂತ ಈ ವರ್ಷ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ(ಕೆಎಸ್ ಟಿಡಿಸಿ) ಅಡಿಯಲ್ಲಿ ಕಳೆದ ವರ್ಷ ನವೆಂಬರ್ 10 ರಿಂದ 27 ವರೆಗೆ ಒಟ್ಟು 2,484 ರೂಮ್ ಗಳನ್ನು ಕಾಯ್ದಿರಿಸಲಾಗಿತ್ತು. ಆದರೆ ಈ ವರ್ಷ ಅದೇ ಅವಧಿಯಲ್ಲಿ ಕೇವಲ 1,735 ರೂಮ್ ಗಳನ್ನು ಕಾಯ್ದಿರಿಸಲಾಗಿದ್ದು, ಹಲವು ಮಂದಿ ಕಾಯ್ದಿರಿಸುವಿಕೆಯನ್ನು ರದ್ದುಗೊಳಿಸಿದ್ದಾರೆ ಎಂದು ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ತಿಳಿಸಿದ್ದಾರೆ. 
ಹೊಟೆಲ್ ಬುಕಿಂಗ್ ನಿಂದ ಸರ್ಕಾರಕ್ಕೆ ಬರುತ್ತಿದ್ದ ಆದಾಯ 46.23 ಲಕ್ಷದಿಂದ 34.61 ಲಕ್ಷಕ್ಕೆ ಕುಸಿದಿದ್ದು, ಶೇ.25 ರಷ್ಟು ಕುಸಿತ ಕಂಡಿದೆ. ಇನ್ನು ಗೋವಾ ಕೇರಳ ತಮಿಳುನಾಡುಗಳಲ್ಲಿ ಸಂಚರಿಸುವ ಐಷಾರಾಮಿ ಟೂರಿಸ್ಟ್ ರೈಲು ಗೋಲ್ಡನ್ ಚಾರಿಯಟ್ ಗೂ ನೋಟು ನಿಷೇಧದ ಬಿಸಿ ತಟ್ಟಿದೆ.  
ನೋಟು ನಿಷೇಧದ ಪರಿಣಾಮ ಪ್ರವಾಸೋದ್ಯಮದ ಮೇಲೆ ಬೀರಿದೆ ಎಂಬ ಬಗ್ಗೆ ಯಾವುದೇ ಅನುಮಾನಗಳಿಲ್ಲ. ಲಾಡ್ಜ್ ಬುಕಿಂಗ್, ಸಫಾರಿಗಳಿಗೆ ಇದ್ದ ಬೇಡಿಕೆ ನೋಟು ನಿಷೇಧದ ನಂತರ ಕುಸಿದಿದೆ. ಸಾಮಾನ್ಯವಾಗಿ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗಳು ಬರುತ್ತಿದ್ದರು ಎಂದು ಕುಮಾರ್ ಪುಷ್ಕರ್ ಹೇಳಿದ್ದಾರೆ. 
ಪ್ರವಾಸೋದ್ಯಮ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸಹ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸೂಕ್ತ ಯೋಜನೆಯಿಲ್ಲದೇ ಜಾರಿಗೆ ತಂದಿರುವ ನೋಟು ನಿಷೇಧದ ನಿರ್ಧಾರದಿಂದ ಪ್ರವಾಸಿಗರು ಪ್ರಮುಖವಾಗಿ ವಿದೇಶಿ ಪ್ರವಾಸಿಗರು ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.