ತುಮಕೂರು: ಸಾಕುಮಗಳ ಮೇಲೆ ಅತ್ಯಾಚಾರ, ಗರ್ಭಿಣಿಯಾಗಲು ಕಾರಣವಾದ ತಂದೆ ಬಂಧನ
17 ವರ್ಷದ ಸಾಕು ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾಗಿರುವ ಪ್ರಕರಣ ಜಿಲ್ಲೆಯ ಚಿಕ್ಕನಾಯಕನಹಳ್ಳಿ ...

ತುಮಕೂರು: 17 ವರ್ಷದ ಸಾಕು ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾಗಿರುವ ಪ್ರಕರಣ ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಚಿಕ್ಕನಾಯಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಜಯರಾಮ (46) ಎಂಬಾತನೆ ಕೃತ್ಯವೆಸಗಿರುವ ವ್ಯಕ್ತಿ. ಬಾಲಕಿಯ ತಾಯಿ ಮನೆಯಲ್ಲಿಲ್ಲದ ವೇಳೆ ಕುಡಿದ ಅಮಲಿನಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದು, ಬಾಲಕಿ ಸದ್ಯ 5 ತಿಂಗಳ ಗರ್ಭಿಣಿಯಾಗಿದ್ದಾಳೆ.
ಬಾಲಕಿ ತಾನು ಓದುತ್ತಿದ್ದ ಶಾಲೆಯ ಟೀಚರ್ ಗೆ ಈ ವಿಷಯ ತಿಳಿಸಿದ್ದು,ಈ ಸಂಬಂಧ ಬ್ಲಾಕ್ ಶಿಕ್ಷಣಾಧಿಕಾರಿ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಯನ್ನು 6ನೇ ತರಗತಿಯಲ್ಲಿ ಓದುತ್ತಿರುವಾಗಲೇ ಶಾಲೆ ಬಿಡಿಸಲಾಗಿತ್ತು.
ಈ ಬಗ್ಗೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಸಂತ್ರಸ್ಥ ಬಾಲಕಿಗೆ ತುಮಕೂರು ಪುನರ್ವಸತಿ ಕೇಂದ್ರದಲ್ಲಿ ಆರೈಕೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


