ಎರಡನೇ ವಿವಾಹವಾದ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಎರಡನೇ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ....

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಎರಡನೇ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬಿಡದಿಯ ನಿವಾಸದಲ್ಲಿ ಸೋಮವಾರ ಅನುರಾಧ ಎಂಬುವರನ್ನು ಶಾಸ್ತ್ರೋಕ್ತವಾಗಿ ವರಿಸಿದ್ದಾರೆ. ಈ ಸಂದರ್ಭದಲ್ಲಿ ರೈ ಕುಟುಂಬ ಹಾಗೂ ಆಪ್ತರು ಮಾತ್ರ ಭಾಗವಹಿಸಿದ್ದರು. ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ ಅನಾರೋಗ್ಯದಿಂದ 2013 ರಲ್ಲಿ ನಿಧನರಾಗಿದ್ದರು. ರೇಖಾ ಮತ್ತು ಮುತ್ತಪ್ಪ ರೈ ಅವರಿಗೆ ಎರಡು ಗಂಡು ಮಕ್ಕಳಿವೆ.
ಸಕಲೇಶಪುರದವರಾದ ಅನುರಾಧ ಅವರು ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಹಿಳಾ ಉದ್ಯಮಿಯಾಗಿರುವ ಅನುರಾಧ ಮತ್ತು ಮುತ್ತಪ್ಪ ರೈ ಮಧ್ಯೆ ಹಲವು ವರ್ಷಗಳ ಪರಿಚಯವಿತ್ತು. ರೇಖಾ ರೈ ನಿಧನದ ನಂತರ ಇದೀಗ ಇಬ್ಬರು ಎರಡನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


