ಬೆಂಗಳೂರು; 2 ಸಾವಿರ ರು. ಜೆರಾಕ್ಸ್ ನೋಟು ಚಲಾವಣೆ ಮಾಡುತ್ತಿದ್ದವರ ಬಂಧನ
2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಜ್ಞಾನಭಾರತಿ ...

ಬೆಂಗಳೂರು: 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
ಭುವನೇಶ್ವರಿನಗರದ ಶಶಾಂಕ್ , ಮಧು ಕುಮಾರ್, ನಾಗರಾಜು, ಕಿರಣ್ ಕುಮಾರ್, ಬಂಧಿತರು. ಆರೋಪಿಗಳಿಂದ ಎಂಟು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಮಲ್ಲತ್ತಹಳ್ಳಿಯ ವರಲಕ್ಷ್ಮಿ ವೈನ್ ಶಾಪ್‌ಗೆ ಹೋಗಿದ್ದ ಆರೋಪಿಗಳು, 2 ರು. ಸಾವಿರ ಮುಖಬೆಲೆಯ ಜೆರಾಕ್ಸ್ ನೋಟನ್ನು ಶಾಪ್ ಮಾಲೀಕ ನಾಗೇಶ್ ಅವರಿಗೆ ಕೊಟ್ಟಿದ್ದರು. ಆದರೆ ಅದು ನಕಲಿ ನೋಟು ಎಂದು ಕಂಡು ಹಿಡಿದ ನಾಗೇಶ್ ಇಬ್ಬರನ್ನು ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ವಿಚಾರಣೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿ 8 ನೋಟುಗಳನ್ನು ವಶ ಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಜ್ಞಾನ ಭಾರತಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


