ಚಿಕ್ಕಮಗಳೂರು ಬಾಲಕಿ ಪತ್ರಕ್ಕೆ ಸ್ಪಂದಿಸಿದ ಮೋದಿ: ಕುಗ್ರಾಮಕ್ಕೆ ಬಂತು ಅಧಿಕಾರಿಗಳ ದಂಡು
ಚಿಕ್ಕಮಗಳೂರಿನ ನಮನ ಎಂಬ ಬಾಲಕಿ ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ...

ಚಿಕ್ಕಮಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಮ್ಮ ಎಂಬ ಬಾಲಕಿ ಉಪವಾಸ ಸತ್ಯಾಗ್ರಹ ಕೂತು ಗ್ರಾಮಕ್ಕೆ ಶೌಚಾಲಯ ಕಟ್ಟಿಸಿದ ಘಟನೆ ಇನ್ನೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ. ಆಕೆಯ ಈ ಸಾಹಸವನ್ನು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಹೊಗಳಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರಿನ ನಮನ ಎಂಬ ಬಾಲಕಿ ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಕಾರಣ ಇಡೀ ಜಿಲ್ಲಾಡಳಿತವೇ ಕುಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮಾಡಿದ್ದಾಳೆ.
ತಾಲ್ಲೂಕಿನ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೇಖಾನ್ ಹೊರಟ್ಟಿ ಗ್ರಾಮದ ಗೋಪಾಲಗೌಡ ಎಂಬುವವರ ಪುತ್ರಿಯಾದ ಎ.ಜಿ. ನಮನಾ ಪತ್ರ ಬರೆದ ಬಾಲಕಿ. ತಾಲ್ಲೂಕಿನ ಬಿದರಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಅ.6 ರಂದು ಆಲೆಖಾನ್ ಹೊರಟ್ಟಿ ಗ್ರಾಮದಲ್ಲಿನ ಮೂಲ ಸೌಲಭ್ಯ ಸಮಸ್ಯೆಗಳ ಕುರಿತು ಪ್ರಧಾನಿಯವರಿಗೆ ಪತ್ರ ಬರೆದಿದ್ದರು.
ಪತ್ರದ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಪ್ರಧಾನಿ ಕಚೇರಿಯಿಂದ ಜಿಲ್ಲಾ ಪಂಚಾಯಿತಿಗೆ ಆದೇಶ ಬಂದಿತ್ತು. ಜಿಲ್ಲಾ ಪಂಚಾಯಿತಿಯು ಸೋಮವಾರ ರಾತ್ರಿಯೇ ಬಾಲಕಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿತು. ಮಂಗಳವಾರ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲೇಖಾನ್ ಹೊರಟ್ಟಿ ಪಶ್ಚಿಮ ಘಾಟ್ ಗಳ ದಟ್ಟಅರಣ್ಯ ಪ್ರದೇಶದಲ್ಲಿದೆ. ಈ ಗ್ರಾಮಕ್ಕೆ ವಿದ್ಯುತ್ ಸಂಪರ್ಕವಿಲ್ಲ, ಆರೋಗ್ಯ ಸೇವೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಬಾಲಕಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


