ರಾಜ್ಯ

ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ

ಜಾತ್ಯತೀತ ಜನತಾದಳ ಪಕ್ಷ(ಜೆಡಿಎಸ್)ದ ಕಾರ್ಯಕರ್ತ ಕೇಬಲ್ ಕುಮಾರ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ...

ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತನ ಬರ್ಬರ ಹತ್ಯೆ
ಕುಮಾರ್
Published On :
ಮಂಡ್ಯ: ಜಾತ್ಯತೀತ ಜನತಾದಳ ಪಕ್ಷ(ಜೆಡಿಎಸ್)ದ ಕಾರ್ಯಕರ್ತ ಕೇಬಲ್ ಕುಮಾರ ಎಂಬಾತನನ್ನು ಅಪರಿಚಿತ ದುರ್ಷರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. 
ಮಳವಳ್ಳಿ ತಾಲೂಕಿನ ಜನಮನಹಳ್ಳಿ ಗ್ರಾಮದ ಕುಮಾರ್ ಅಲಿಯಾಸ್ ಕೇಬಲ್ ಕುಮಾರ ನನ್ನು ಕಳೆದ ರಾತ್ರಿ ಪಲ್ಸರ್ ಬೈಕ್ ನಲ್ಲಿ ಜನಮನಹಳ್ಳಿ ಗ್ರಾಮದಿಂದ ಹಲಗೂರಿಗೆ ಬರುತ್ತಿದ್ದ ವೇಳೆ ಆರ್ಎಕ್ಸ್ ಬೈಕ್ ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಅಡ್ಡಗಟ್ಟಿ ಕಣ್ಣಿಗೆ ಕಾರದಪುಡಿ ಎರಚಿ ರಾಡ್ ನಿಂದ ದೇಹದ ವಿವಿಧೆಡೆ ಇರಿದು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. 
ಜಾತ್ಯತೀತ ಪಕ್ಷದ ಕಾರ್ಯಕರ್ತನಾಗಿದ್ದ ಕುಮಾರ ಇತ್ತೀಚೆಗಷ್ಟೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.