ಕನ್ನಡದಲ್ಲಿ ನೀಟ್ ಪರೀಕ್ಷೆಯನ್ನು ಕರ್ನಾಟಕ ಸರ್ಕಾರವೇ ಕೇಳಿಲ್ಲ: ಕೇಂದ್ರ
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿ...

Published On :
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಬರೆಯುವ ಅವಕಾಶವನ್ನು ನೀಡಿಲ್ಲ ಎಂದು ಈಗ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದ್ದು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಬರೆಯಲು ಅವಕಾಶ ಕೇಳುತ್ತಿದೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರದ ಬಳಿ ಅಭಿಪ್ರಾಯ ಕೇಳಿದ್ದಾಗ ಸುಮ್ಮನೆ ಕುಳಿತಿತ್ತು.
ಕನ್ನಡ ಭಾಷೆಯಲ್ಲಿ ನೀಟ್ ಪರೀಕ್ಷೆ ಬರೆಯಲು ಆಯ್ಕೆ ನೀಡದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಈ ಕುರಿತು ಪ್ರತಿಭಟನೆ ಪತ್ರವನ್ನು ಕೇಂದ್ರಕ್ಕೆ ಬರೆಯಲಾಗುವುದು ಎಂದು ಹೇಳಿದ್ದರು.
ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಸ್ಥಳೀಯ ಭಾಷೆಗಳನ್ನು 2017ರ ನೀಟ್ ಪರೀಕ್ಷೆಯಲ್ಲಿ ಸೇರಿಸುವ ಬಗ್ಗೆ ನಾವು ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯವನ್ನು ಕೇಳಿದ್ದೆವು. ಕೆಲವು ರಾಜ್ಯ ಸರ್ಕಾರಗಳು ಉತ್ತರ ನೀಡಿರಲಿಲ್ಲ, ಅವುಗಳಲ್ಲಿ ಕರ್ನಾಟಕ ಕೂಡ ಒಂದು ಎನ್ನುತ್ತಾರೆ. ಎಲ್ಲಾ ರಾಜ್ಯ ಸರ್ಕಾರಗಳ ಕಾರ್ಯದರ್ಶಿಗಳು, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಹ ಡಿಸೆಂಬರ್ ಮೊದಲ ವಾರದಲ್ಲಿ ನಡೆದ ವಿಡಿಯೊ ಕಾನ್ಫರೆನ್ಸ್ ನಲ್ಲಿ ಅಭಿಪ್ರಾಯ ನೀಡುವಂತೆ ಹೇಳಲಾಗಿತ್ತು. ಅವರು ಉತ್ತರ ನೀಡಲು ಇನ್ನಷ್ಟು ಸಮಯ ಕೇಳಿದ್ದಾರೆ ಎಂದರು.
ನೀಟ್ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಕೂಡ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕು ಎಂದು ಹೇಳುವ ಮುನ್ನ ಕರ್ನಾಟಕ ಸರ್ಕಾರ ನಡೆಸುವ ಸಿಇಟಿ ಪರೀಕ್ಷೆ ಬಗ್ಗೆ ಯೋಚಿಸಬೇಕು. ಈ ವರ್ಷದವರೆಗೆ ಸಿಇಟಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka GovernmentCentreಕೇಂದ್ರಕರ್ನಾಟಕ ಸರ್ಕಾರNEET examನೀಟ್ ಪರೀಕ್ಷೆKannada language optionಕನ್ನಡ ಭಾಷೆ ಆಯ್ಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


