ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಶಿಕ್ಷಕರಿಂದ ಮುಷ್ಕರದ ಬೆದರಿಕೆ
2016-17ನೇ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಕಳೆದ ವರ್ಷದಂತೆ ತೊಡಕು ಎದುರಾಗಲಿದೆ....

Published On :
ಬೆಂಗಳೂರು: 2016-17ನೇ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಕಳೆದ ವರ್ಷದಂತೆ ತೊಡಕು ಎದುರಾಗಲಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಎಸ್‌ಎಸ್‌ಎಲ್‌ಸಿ) ಇತ್ತೀಚೆಗಷ್ಟೇ ಪರೀಕ್ಷಾ ದಿನಾಂಕವನ್ನು ಘೋಷಿಸಿದ್ದು ಈ ನಡುವೆ ಶಿಕ್ಷಕರು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಈ ಭಾರೀ ಮೌಲ್ಯಮಾಪನಕ್ಕೆ ಗೈರಾಗುವ ಬೆದರಿಕೆಯನ್ನೊಡ್ಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಸಹ ಶಿಕ್ಷಕರ ಸಂಘ ಮುಷ್ಕರ ಮಾಡುವ ಬೆದರಿಕೆಯನ್ನೊಡ್ಡಿದೆ. ಸಂಘದ ಅಧ್ಯಕ್ಷ ಹೆಚ್.ಕೆ ಮಂಜುನಾಥ್ ಅವರು ಫೆಬ್ರವರಿ 2ರಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ್ದಾರೆ.
ವೇತನ ತಾರತಮ್ಯ ಕುರಿತಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ನೇತೃತ್ವದ ಸಮಿತಿ ನೀಡಿರುವ ವರದಿ ಅನ್ವಯ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಮಂಜುನಾಥ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


