ನೀಟ್ ಪರೀಕ್ಷೆಯಲ್ಲಿ ಕನ್ನಡ ಭಾಷೆ ಸೇರಿಸಲು ನಾವು ಸಿದ್ಧ: ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಕನ್ನಡ ಭಾಷೆಯಲ್ಲೂ ಬರೆಯುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ರಾಜ್ಯ ಸರ್ಕಾರವು ...

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಕನ್ನಡ ಭಾಷೆಯಲ್ಲೂ ಬರೆಯುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ರಾಜ್ಯ ಸರ್ಕಾರವು ಕ್ರಮಬದ್ಧವಾಗಿ ಪ್ರಸ್ತಾವ ಸಲ್ಲಿಸಿದರೆ ಪರಿಗಣಿಸುತ್ತೇವೆ’ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ನಿಮ್ಹಾನ್ಸ್ ನಲ್ಲಿ ಏರ್ಪಡಿಸಿದ್ದ 21 ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಮೊದಲು ಇಂಗ್ಲೀಷ್ ನಲ್ಲೇ ನೀಟ್ ಪರೀಕ್ಷೆ ಬರೆಯುವಂತೆ ಕರ್ನಾಟಕ ಸರ್ಕಾರ ಸಲಹೆ ನೀಡಿತ್ತು. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದ ಬಗ್ಗೆ ಜನರಿಂದ ವಿರೋಧ ವ್ಯಕ್ತವಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗಲೂ ಕಾಲ ಮಿಂಚಿಲ್ಲ. ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಂಡು ಪ್ರಸ್ತಾವನೆ ಸಲ್ಲಿಸಲಿ’ಎಂದರು.
ಆಯಾಯಾ ಪ್ರಾದೇಶಿಕ ಭಾಷೆಗಳಲ್ಲಿ ಎನ್‌ಇಇಟಿ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಹಾಗೂ ಸೀಟು ಹಂಚಿಕೆ ವೇಳೆ ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಅಭಿಪ್ರಾಯ ಕೇಳಿದ್ದೆವು. ಈ ಕುರಿತು ವಿಡಿಯೊ ಸಂವಾದ ಹಮ್ಮಿಕೊಂಡಾಗಲೂ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ಕೋರಿರಲಿಲ್ಲ ಆದರೆ ಈಗ ರಾಜ್ಯ ಸರ್ಕಾರ ತನ್ನ ನಿಲುವನ್ನು ಬದಲಾಯಿಸಿಕೊಂಡಿದೆ ಎಂದು ಅವರು ಹೇಳಿದರು.
ಕನ್ನಡದಲ್ಲಿ ನೀಟ್ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ರಾಜ್ಯ ಸಂಸ್ಕೃತಿ ಸಚಿವೆ ಉಮಾಶ್ರೀ ಪ್ರಧಾನಿ ನರೇಂದ್ರಮ ಮೋದಿ ಮತ್ತು ಮುಖ್ಯಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ನೀಟ್ ಪರೀಕ್ಷೆಯನ್ನ ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿಕೊಡುವಂತೆ ಕೋರಿದ್ದರು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ 2017ರಲ್ಲಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕನ್ನಡದಲ್ಲಿ ಬರೆಯಲು ಅವಕಾಶ ನೀಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನೂ (ಎನ್‌ಇಇಟಿ) ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ರಾಜ್ಯದ ವಿದ್ಯಾರ್ಥಿಗಳು ಕನ್ನಡದಲ್ಲಿ ‘ನೀಟ್’ ಪರೀಕ್ಷೆ ಬರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಬಿಎಸ್‌ಸಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


