ಬೆಂಗಳೂರಿನ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ!
ಭ್ರಷ್ಟ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಗುರುವಾರ ಬೆಂಗಳೂರಿನ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಗುರುವಾರ ಬೆಂಗಳೂರಿನ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.
ಬಿಬಿಎಂಪಿ ಇಇ ಬಿಆರ್ ಮುದ್ದರಾಜು ಅವರ ನಿವಾಸ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭೂ ದಾಖಲೆ ವಿಭಾಗದ ಉಪ ನಿರ್ದೇಶಕ ಇ ಪ್ರಕಾಶ್ ಅವರ ಕಚೇರಿ ನಿವಾಸ ಹಾಗೂ ಬೆಂಗಳೂರು ಗ್ರಾಮಾಂತರ ಕೈಗಾರಿಕಾ ಜಂಟಿ ನಿರ್ದೇಶಕ ಜಿ.ನಾಗರಾಜು ಅವರ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ದಾಳಿ ವೇಳೆ ಹಲವು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶರಪಡಿಸಿಕೊಂಡಿದ್ದು, ಇನ್ನಷ್ಟೇ ಅಧಿಕಾರಿಗಳ ಅಕ್ರಮದ ಪ್ರಮಾಣ ಬಯಲಾಗಬೇಕಿದೆ.
ನೋಟು ನಿಷೇಧ ಬಳಿಕ ಹಲವು ಅಧಿಕಾರಿಗಳು ತಮ್ಮಲ್ಲಿದ್ದ ಹಳೆಯ ನೋಟುಗಳನ್ನು ಕಮಿಷನ್ ನೀಡಿ ಹೊಸ ನೋಟುಗಳಾಗಿ ಬದಲಾಯಿಸಿಕೊಂಡಿದ್ದು, ಭ್ರಷ್ಟಾಚಾರ ನಡೆಸಿರುವ ಕುರಿತು ಮಾಹಿತಿಯಾಧಾರದ ಮೇಲೆ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


