ರಾಜ್ಯ

ಬೆಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ

ನಾಗರಿಕರಿಗೆ ಸ್ಪಂದಿಸುವ ಪೊಲೀಸ್ ವ್ಯವಸ್ಥೆ ರೂಪಿಸುವುದು ನಮ್ಮ ಮೊದಲ ಗುರಿ ಎಂದು...

ಬೆಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಪ್ರವೀಣ್ ಸೂದ್ ಅಧಿಕಾರ ಸ್ವೀಕಾರ
ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಪ್ರವೀಣ್ ಸೂದ್
Published On :
ಬೆಂಗಳೂರು: ನಾಗರಿಕರಿಗೆ ಸ್ಪಂದಿಸುವ ಪೊಲೀಸ್ ವ್ಯವಸ್ಥೆ ರೂಪಿಸುವುದು ನಮ್ಮ ಮೊದಲ ಗುರಿ ಎಂದು ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.  
ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಹಿಳೆಯರಿಗೆ, ಮಕ್ಕಳಿಗೆ, ಹಿರಿಯ ನಾಗರಿಕರಿಗೆ ರಕ್ಷಣೆ ನೀಡುವುದು ನಮ್ಮ ಆದ್ಯ ಕರ್ತವ್ಯ. ಅದಕ್ಕೆ ಪೂರಕವಾಗಿ ಕೆಲಸ ಮಾಡುತ್ತೇನೆ. ಅತ್ಯಾಚಾರ ಪ್ರಕರಣಗಳೂ ಸೇರಿದಂತೆ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದು ನಮ್ಮ ಜವಾಬ್ದಾರಿ. ಅದನ್ನು ನಿಭಾಯಿಸುತ್ತೇವೆ ಎಂದು ಭರವಸೆ ನೀಡಿದರು.
ಬೆಂಗಳೂರು ನಗರದ ಸಂಚಾರಿ ವಿಭಾಗದಲ್ಲಿ ಹೆಚ್ಚುವರಿ ಆಯುಕ್ತರಾಗಿ ಕೆಲಸ ಮಾಡಿದ ತಮಗೆ ಸಂಚಾರ ಸಮಸ್ಯೆ ತಿಳಿದಿದೆ. ದಂಡ ವಸೂಲಿ ನಮ್ಮ ಆದ್ಯತೆ ಅಲ್ಲ, ಸುಗಮ ಸಂಚಾರ ನಮ್ಮ ಪ್ರಾಮುಖ್ಯತೆ. ಪ್ರತಿಯೊಬ್ಬರೂ ಶಿಸ್ತಿನ ಸಂಚಾರಕ್ಕೆ ಒಗ್ಗಿಕೊಳ್ಳಬೇಕು. ಪೊಲೀಸರು ಇರದೆ ಇದ್ದರೆ ಕೆಂಪು ದೀಪವನ್ನು ದಾಟಿ ಹೋಗುವ ವಾಹನ ಸವಾರರಿದ್ದಾರೆ. ನಿಲುಗಡೆಯ ಗೆರೆ ದಾಟಿ ಮುಂದೆ ಹೋಗುವವರಿದ್ದಾರೆ. ಇದು ಸರಿಯಲ್ಲ. ಸಂಚಾರ ನಿಯಮ ಉಲ್ಲಂಘಿಸುವುದು ಸುರಕ್ಷತೆಯೂ ಅಲ್ಲ. ನಾಗರಿಕರು ಸ್ವಯಂ ಶಿಸ್ತನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಇದರ ಜೊತೆಗೆ ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಪ್ರಮುಖ ಬದಲಾವಣೆ ಮಾಡಿದೆ. 

32 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಅದರಲ್ಲಿ 16 ಪೊಲೀಸರು ಬೆಂಗಳೂರು ನಗರಕ್ಕೆ ಸೇರಿದವರಾಗಿದ್ದಾರೆ. 16 ಹಿರಿಯ ಪೊಲೀಸ್ ಅಧಿಕಾರಿಗಳ ಹುದ್ದೆಗಳನ್ನು ಬದಲಾವಣೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.