ತವರಲ್ಲೇ ಸಿಎಂಗೆ ಮುಖಭಂಗ: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು
ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಒಟ್ಟಾರೆ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದರೂ, ಸಿಎಂ ಸಿದ್ದರಾಮಯ್ಯ ಮಾತ್ರ ತಮ್ಮ ತವರು ವರುಣಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದಾರೆ...

ಮೈಸೂರು: ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಒಟ್ಟಾರೆ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದರೂ, ಸಿಎಂ ಸಿದ್ದರಾಮಯ್ಯ ಮಾತ್ರ ತಮ್ಮ ತವರು ವರುಣಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಮುಖಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದು, ಬಿಜೆಪಿ ಅಭ್ಯರ್ಥಿ ಪ್ರೇಮ ಮಹದೇವಯ್ಯ ಅವರು ಗೆಲುವು ಸಾಧಿಸಿದ್ದಾರೆ. ಇದರ ಜೊತೆಗೆ 4 ತಾಲೂಕು ಪಂಚಾಯ್ತಿ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮಕಾಡೆ ಮಲಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಎಲ್ಲ ನಿರೀಕ್ಷೆಗಳನ್ನು ವರುಣಾ ಜನತೆ ಹುಸಿಗೊಳಿಸಿದ್ದಾರೆ. ರಾಜಕೀಯವಾಗಿ ಅತಂತ್ರ ಸ್ಥಿತಿಯಲ್ಲಿದ್ದ ಸಿದ್ಧರಾಮಯ್ಯ ಅವರನ್ನು ಚುನಾವಣೆಯಲ್ಲಿ ಹೆಚ್ಚು ಮತ ನೀಡಿ ಅಭೂತಪೂರ್ವವಾಗಿ ಗೆಲ್ಲಿಸಿದ್ದ ಇದೇ ವರುಣಾ ಕ್ಷೇತ್ರದ ಜನರು ಇದೀಗ ಬಿಜೆಪಿಯತ್ತ ವಾಲಿದ್ದು, ಸಿಎಂ ಪ್ರತಿಷ್ಠೆಗೆ ಕೊಡಲಿ ಪೆಟ್ಟು ಬಿದ್ದಂತಾಗಿದೆ.
ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಜನತೆಯ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಿಎಂ ವಿಫಲರಾದ ಹಿನ್ನಲೆಯಲ್ಲಿ ವರುಣಾ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಪರೋಕ್ಷವಾಗಿ ಸಿಎಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಒಟ್ಟು 49 ಕ್ಷೇತ್ರಗಳನ್ನು ಹೊಂದಿರುವ ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವರುಣಾ ಕ್ಷೇತ್ರ ಕೂಡ ಒಂದಾಗಿದ್ದು, ಕಾಂಗ್ರೆಸ್ ಇಲ್ಲಿ ಹೀನಾಯ ಸೋಲು ಕಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


