ರಾಜ್ಯ

ಚಾ.ನಗರದಲ್ಲಿ ಕಾಂಗ್ರೆಸ್, ಉಡುಪಿಯಲ್ಲಿ ಬಿಜೆಪಿ, ಬೆಂ.ಗ್ರಾಮಾಂತರದಲ್ಲಿ ಜೆಡಿಎಸ್ ಗೆಲುವು

ಜಿಲ್ಲಾ ಪಂಚಾಯಿತಿ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಿರೀಕ್ಷೆಯೆಂತೆಯೇ ಕಾಂಗ್ರೆಸ್ ಗೆಲುವು ಸಾಧಿಸಿದೆ...

ಚಾ.ನಗರದಲ್ಲಿ ಕಾಂಗ್ರೆಸ್, ಉಡುಪಿಯಲ್ಲಿ ಬಿಜೆಪಿ, ಬೆಂ.ಗ್ರಾಮಾಂತರದಲ್ಲಿ ಜೆಡಿಎಸ್ ಗೆಲುವು
ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಜಿಲ್ಲಾ ಪಂಚಾಯಿತಿ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಿರೀಕ್ಷೆಯೆಂತೆಯೇ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಚಾಮರಾಜನಗರ ಜಿಲ್ಲೆಯ ಒಟ್ಟು 23 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, 8 ಕ್ಷೇತ್ರ ಬಿಜೆಪಿ ತೆಕ್ಕೆಗೆ ಜಾರಿದೆ. ಇನ್ನು ಕಾಂಗ್ರೆಸ್ ಗೆ ತೀವ್ರ ಪೈಪೋಟಿ ನೀಡುವ ವಿಶ್ವಾಸ  ಹೊಂದಿದ್ದ ಜೆಡಿಎಸ್ ಶೂನ್ಯ ಸಾಧನೆಯೊಂದಿಗೆ ಮುಜುಗರಕ್ಕೀಡಾಗಿದೆ.

ಅಂತೆಯೇ ಉಡುಪಿ ಜಿಲ್ಲಾ ಪಂಚಾಯಿತಿ ಫಲಿತಾಂಶ ಕೂಡ ಹೊರಬಿದ್ದಿದ್ದು, ಇಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಮುನ್ನಡೆ ಸಾಧಿಸಿದೆ. ಉಡುಪಿಯ ಒಟ್ಟು 26 ಕ್ಷೇತ್ರಗಳ ಪೈಕಿ ಬಿಜೆಪಿ ಬರೊಬ್ಬರಿ 19  ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಗ್ರ ಸ್ಥಾನದಲ್ಲಿದೆ. ಇನ್ನು ಕಾಂಗ್ರೆಸ್ ಪಕ್ಷ 7 ಸ್ಥಾನದೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಜೆಡಿಎಸ್ ಗೆ ಮಾತ್ರ ಇಲ್ಲಿಯೂ ಯಾವುದೇ ಗೆಲುವು  ಸಾಧಿಸಿಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದ್ದು, ಒಟ್ಟು 21 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 7, ಬಿಜೆಪಿ 4 ಮತ್ತು ಜೆಡಿಎಸ್ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.