ರಾಜ್ಯ

ಉ.ಕನ್ನಡ, ಗದಗ, ದಾವಣಗೆರೆಯಲ್ಲಿ ಕಾಂಗ್ರೆಸ್, ಯಾದಗಿರಿ ಬಿಜೆಪಿ ತೆಕ್ಕೆಗೆ

ಜಿಲ್ಲಾ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ನಿರೀಕ್ಷೆಯಂತೆಯೇ ಕಾಂಗ್ರೆಸ್ ತನ್ನ ಮುನ್ನಡೆಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಉತ್ತರ ಕನ್ನಡ ಮತ್ತು ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ ಮುನ್ನಡೆ ಸಾಧಿಸಿದೆ...

ಉ.ಕನ್ನಡ, ಗದಗ, ದಾವಣಗೆರೆಯಲ್ಲಿ ಕಾಂಗ್ರೆಸ್, ಯಾದಗಿರಿ ಬಿಜೆಪಿ ತೆಕ್ಕೆಗೆ
ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಜಿಲ್ಲಾ ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ನಿರೀಕ್ಷೆಯಂತೆಯೇ ಕಾಂಗ್ರೆಸ್ ತನ್ನ ಮುನ್ನಡೆಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಉತ್ತರ ಕನ್ನಡ ಮತ್ತು ದಾವಣಗೆರೆ  ಜಿಲ್ಲಾ ಪಂಚಾಯಿತಿಯಲ್ಲಿ ಮುನ್ನಡೆ ಸಾಧಿಸಿದೆ.

ಯಾದಗಿರಿ ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಯಾದಗಿರಿಯ ಒಟ್ಟು 24 ಕ್ಷೇತ್ರಗಳ ಪೈಕಿ ಬಿಜೆಪಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 9 ಮತ್ತು  ಜೆಡಿಎಸ್ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಉತ್ತರ ಕನ್ನಡದ ಒಟ್ಟು 39 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಬರೊಬ್ಬರಿ 24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 9, ಜೆಡಿಎಸ್ 2, ಪಕ್ಷೇತರರು 2  ಕ್ಷೇತ್ರಗಳಲ್ಲಿ ಸಾಧಿಸಿದ್ದಾರೆ.

ದಾವಣಗೆರೆಯ ಒಟ್ಟು 36 ಸ್ಥಾನಗಳ ಪೈಕಿ ಕಾಂಗ್ರೆಸ್ 20 ಸ್ಥಾನಗಳನ್ನು ಗಳಿಸಿದ್ದರೆ, ಬಿಜೆಪಿ 11 ಮತ್ತು ಜೆಡಿಎಸ್ 4 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಗದಗ ಜಿಲ್ಲಾ ಪಂಚಾಯಿತಿಯಲ್ಲಿಯೂ  ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಒಟ್ಟು 19 ಸ್ಥಾನಗಳಲ್ಲಿ ಕಾಂಗ್ರೆಸ್ 10 ರಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಗೆ ತೀವ್ರ ಪೈಪೋಟಿ ನೀಡಿರುವ ಬಿಜೆಪಿ 9 ಸ್ಥಾನಗಳನ್ನು ಗಳಿಸಿದ್ದರೆ, ಜೆಡಿಎಸ್ ಗೆ ಇಲ್ಲಿ  ಯಾವುದೇ ಸ್ಥಾನ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.