ರಾಜ್ಯ

ಪಂಚಾಯತಿ ಸಮರ: ಹಾಸನದಲ್ಲಿ ಜೆಡಿಎಸ್ ಪಾರುಪತ್ಯ, ಮೈಸೂರಿನಲ್ಲಿ "ಕೈ" ಮುನ್ನಡೆ

ಹಾಸನ ಜಿಲ್ಲಾ ಪಂಚಾಯಿತಿ ಚುನಾವಣಾ ಸಮರದಲ್ಲಿ ನಿರೀಕ್ಷೆಯಂತೆಯೇ ಜೆಡಿಎಸ್ ಮುನ್ನಡೆ ಸಾಧಿಸಿದ್ದು, ಜಿಲ್ಲೆಯಲ್ಲಿ ತಾನೇ ಕಿಂಗ್ ಮೇಕರ್ ಎಂಬುದನ್ನು ಸಾಬೀತು ಪಡಿಸಿದೆ...

ಪಂಚಾಯತಿ ಸಮರ: ಹಾಸನದಲ್ಲಿ ಜೆಡಿಎಸ್ ಪಾರುಪತ್ಯ, ಮೈಸೂರಿನಲ್ಲಿ "ಕೈ" ಮುನ್ನಡೆ
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಚುನಾವಣಾ ಸಮರದಲ್ಲಿ ನಿರೀಕ್ಷೆಯಂತೆಯೇ ಜೆಡಿಎಸ್ ಮುನ್ನಡೆ ಸಾಧಿಸಿದ್ದು, ಜಿಲ್ಲೆಯಲ್ಲಿ ತಾನೇ ಕಿಂಗ್ ಮೇಕರ್ ಎಂಬುದನ್ನು ಸಾಬೀತು ಪಡಿಸಿದೆ.

ಹಾಸನದ ಒಟ್ಟು 40 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳನ್ನು ಜೆಡಿಎಸ್ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ಆಗ್ರಸ್ಥಾನದಲ್ಲಿದೆ. ಇನ್ನು ಜೆಡಿಎಸ್ ತೀವ್ರ ಪೈಪೋಟಿ ನೀಡುತ್ತಿರುವ ಕಾಂಗ್ರೆಸ್ ಪಕ್ಷ 13  ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, ಬಿಜೆಪಿ ಕೇವಲ 2 ಸ್ಥಾನಗಳನ್ನು ಗಳಿಸುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ಪಕ್ಷದ ತೀವ್ರ ಪೈಪೋಟಿ ನಡುವೆಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.  ಮೈಸೂರಿನ ಒಟ್ಟು 49 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ತೀವ್ರ ಪೈಪೋಚಿ ನೀಡಿದ ಜೆಡಿಎಸ್ ಒಟ್ಟು 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಬಿಜೆಪಿ ಕೇವಲ  8 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.