ರಾಜ್ಯ

ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿದ ಎಸ್ಐಟಿ

ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ...

ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿದ ಎಸ್ಐಟಿ
ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ವೈ.ಭಾಸ್ಕರ್ ರಾವ್
Published On :
ಬೆಂಗಳೂರು: ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ವೈ.ಭಾಸ್ಕರ್ ರಾವ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ವಿಶೇಷ ತನಿಖಾ ತಂಡ(ಎಸ್ ಐಟಿ) ರಾಜ್ಯ ಸರ್ಕಾರದ ಅನುಮತಿ ಕೋರಿದೆ. 
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ವೈ ಭಾಸ್ಕರ್ ರಾವ್ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ದೊರಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿ ಎಂದು ಎಸ್ ಐಟಿ ಪತ್ರದಲ್ಲಿ ತಿಳಿಸಿದೆ. 
ಈಗಾಗಲೇ ಎಸ್ ಐಟಿ ಈ ಕುರಿತು 500 ಪುಟಗಳ ವರದಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸಲ್ಲಿಸಿದೆ. ಪುತ್ರ ಅಶ್ವಿನ್ ರಾವ್, ಅಮಾನತುಗೊಂಡಿರುವ ಪಿಆರ್ ಓ ಸಯ್ಯದ್ ರಿಜಾಯ್ ಮತ್ತು ಇತರೆ ಆರೋಪಿಗಳು ಸೇರಿಕೊಂಡು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಅಧಿಕಾರಿಗಳನ್ನು ಕರೆಸಿಕೊಂಡು ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನ್ಯಾ.ಭಾಸ್ಕರ್ ರಾವ್ ಅವರಿಗೆ ಮಾಹಿತಿ ಇದ್ದರೂ, ತಡೆಯುವಲ್ಲಿ ವಿಫಲರಾಗಿದ್ದಾರೆ. 
ಈ ಹಿನ್ನಲೆಯಲ್ಲಿ ಅಕ್ರಮದ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗದೆ ಇರುವುದರಿಂದ ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಬೇಕಿದೆ ಎಂದು ಎಸ್ ಐಟಿ ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.