ರಾಜ್ಯ

ಬರ ಅಧ್ಯಯನ: ರಾಜ್ಯದ ವಿವಿಧೆಡೆ ಕೇಂದ್ರ ತಂಡದಿಂದ ಸಮೀಕ್ಷೆ

ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆ...

ಬರ ಅಧ್ಯಯನ: ರಾಜ್ಯದ ವಿವಿಧೆಡೆ ಕೇಂದ್ರ ತಂಡದಿಂದ ಸಮೀಕ್ಷೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ. 
ಕೇಂದ್ರ ಸರ್ಕಾರದಿಂದ ನಿಯೋಜಿಸಲ್ಪಟ್ಟ ಬರ ಅಧ್ಯಯನ 10 ಅಧಿಕಾರಿಗಳ ಮೂರು ತಂಡ, ಬೆಳಗಾವಿ, ವಿಜಯಪುರ, ಹುಬ್ಬಳ್ಳಿ, ಗದಗ ಜಿಲ್ಲೆಯ ಹಲವು ಗ್ರಾಮಗಳಿಗೆ ತೆರಳಿ ರೈತರೊಂದಿಗೆ ಮಾತುಕತೆ ನಡೆಸಿದ್ದಾರೆ.
ಬೆಳಗಾವಿ, ವಿಜಯಪುರಗಳಲ್ಲಿ ಅಧ್ಯಯನ ನಡೆಸಿದ ತಂಡದಲ್ಲಿ ಕೇಂದ್ರ ಇಂಧನ ಸಚಿವಾಲಯದ ಕಾರ್ಯದರ್ಶಿ ಕೆಕೆ ಮಿಶ್ರಾ, ಕೇಂದ್ರ ಕುಡಿಯುವ ನೀರು ಯೋಜನಾ ವಿಭಾಗದ ಸಂಯೋಜಕ ಡಾ.ಬ್ರಿಜೇಶ್ ಶ್ರೀವತ್ಸವ, ಹಣಕಾಸು ಮತ್ತು ವಿತ್ತ ಸಿಚಿವಾಲಯದ ಎಂಬಿ ಕಾಲ್, ಗ್ರಾಮೀಣಾಭಿವೃದ್ಧಿ ಇಲಾಕೆ ಉಪಕಾರ್ಯದರ್ಶಿ ರಾಮಕೃಷ್ಣ ಅವರಿದ್ದರು.
ಇನ್ನು ಹುಬ್ಬಳ್ಳಿ, ಧಾರವಾಡಗಳಲ್ಲಿ ಅಧ್ಯಯನ ನಡೆಸಿದ ತಂಡದಲ್ಲಿ ಕೇಂದ್ರ ಆಹಾರ ನಿಗಮದ ಡಿಜಿಎಂ ವಿಜಯಕುಮಾರ, ಜಲ ಸಂಪನ್ಮೂಲ ಇಲಾಖೆ ಹಿರಿಯ ಜಂಟಿ ಆಯುಕ್ತ ನರೇಶ ಕುಮಾರ, ನೀತಿ ಆಯೋಗದ ಸಂಶೋಧನಾಧಿಕಾರಿ ಗಣೇಶರಾಮ್ ಇದ್ದರು. 
ರಾಜ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಬರ ಅಧ್ಯಯನ ಕುರಿತ ಸಂಪೂರ್ಣ ವರದಿಯನ್ನು ಮಾರ್ಚ್ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.