ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 30ರಿಂದ : ಸಹಾಯವಾಣಿ ಆರಂಭ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 3ರಿಂದ 28ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭಿಸಲಿದೆ. ..

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 3ರಿಂದ 28ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭಿಸಲಿದೆ.
ಮಾರ್ಚ್ 30ರಿಂದ 2016ನೇ ಸಾಲಿನ ಪರೀಕ್ಷೆಗಳು ಆರಂಭವಾಗಲಿವೆ. ಈ ಸಹಾಯವಾಣಿ ಮಾರ್ಚ್ 3ರಿಂದ 28ರ ತನಕ ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ದಿನಾಂಕ ಮಾರ್ಚ್ 30 ರಿಂದ ಏಪ್ರಿಲ್ 13ರ ತನಕ ಸಹಾಯವಾಣಿ ಬೆಳಗ್ಗೆ 9 ರಿಂದ ಮಧ್ಯಾಹ್ನ 2.30ರವರೆಗೆ ಮಾತ್ರ ಕಾರ್ಯನಿರ್ವಹಣೆ ಮಾಡಲಿವೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ವಿದ್ಯಾರ್ಥಿಗಳ ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮವನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು, ಸಮಾಜ, ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ.
ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನವಹಿಸಲು ಸಾಧ್ಯವಾಗುವುದಿಲ್ಲ. ಇಂತಹ ಸಮಸ್ಯೆಯನ್ನು ಬಗೆಹರಿಸಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಅವಶ್ಯಕತೆ ಇದೆ. ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿಯನ್ನು ಆರಂಭಿಸಲಾಗುತ್ತಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರತಿವರ್ಷ ವರ್ಷವೂ ಸಹಾಯವಾಣಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತದೆ.
ಸಹಾಯವಾಣಿ ಸಂಖ್ಯೆಗಳು : 080-23310075, 080-23310076
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


