ರಾಜ್ಯ

ಖಾಸಗಿ ಸಮಾರಂಭಗಳಲ್ಲಿ ಡ್ರೋಣ್ ಬಳಕೆ ನಿಷೇಧಕ್ಕೆ ರಾಜ್ಯ ಪೊಲೀಸ್ ಇಲಾಖೆ ಮನವಿ

ಭದ್ರತಾ ದೃಷ್ಟಿಯಿಂದ ಖಾಸಗಿ ಕಾರ್ಯಕ್ರಮಗಳಲ್ಲಿ ಡ್ರೋಣ್ ಬಳಕೆ ಮೇಲೆ ನಿರ್ಬಂಧ ಹೇರಬೇಕೆಂದು ರಾಜ್ಯ ಪೊಲೀಸ್ ಇಲಾಖೆ ಸರ್ಕಾರಕ್ಕೆ ...

ಖಾಸಗಿ ಸಮಾರಂಭಗಳಲ್ಲಿ ಡ್ರೋಣ್ ಬಳಕೆ ನಿಷೇಧಕ್ಕೆ ರಾಜ್ಯ ಪೊಲೀಸ್ ಇಲಾಖೆ ಮನವಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು : ಭದ್ರತಾ ದೃಷ್ಟಿಯಿಂದ ಖಾಸಗಿ ಕಾರ್ಯಕ್ರಮಗಳಲ್ಲಿ ಡ್ರೋಣ್ ಬಳಕೆ ಮೇಲೆ ನಿರ್ಬಂಧ ಹೇರಬೇಕೆಂದು ರಾಜ್ಯ ಪೊಲೀಸ್ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿದೆ.

ಬೆಂಗಳೂರು ಸೇರಿದಂತೆ ನಾಡಿನ ಪ್ರಮುಖ ನಗರಗಳಲ್ಲಿ ಖಾಸಗಿ ಕಾರ್ಯಕ್ರಮಗಳಲ್ಲಿ ಡ್ರೋಣ್ ಕ್ಯಾಮೆರಾ ಬಳಕೆಯಾಗುತ್ತಿರುವುದರಿಂದ ಭದ್ರತೆ ಪರಿಣಾಮ ಬೀರಲಿದೆ ಎಂಬ ಗುಪ್ತದಳ ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮದುವೆ, ಶೂಟಿಂಗ್, ಸಾರ್ವಜನಿಕ ಸಮಾರಂಭ, ಪಾರ್ಟಿ ಹಾಗೂ ಹಬ್ಬಗಳಲ್ಲಿ ಡ್ರೋಣ್ ಬಳಕೆಯಾಗುತ್ತಿದೆ.

ಭದ್ರತಾ ದೃಷ್ಟಿಯಿಂದ ಗಣ್ಯರು ಸಂಚರಿಸುವ ಮಾರ್ಗ ಹಾಗೂ ಅವರು ಪಾಲ್ಗೊಳ್ಳುವ ಕಾರ್ಯಕ್ರಮದ ಪ್ರದೇಶದಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಡ್ರೋಣ್  ಬಳಕೆ ತಾತ್ಕಾಲಿಕ ನಿಷೇಧ ಹೇರಬೇಕು.

ಕೇಂದ್ರ ಸರ್ಕಾರವು ಮಾರ್ಗಸೂಚಿ ಸಿದ್ದಪಡಿಸುತ್ತಿದೆ. ಹೀಗಾಗಿ ಮಾರ್ಗಸೂಚಿ ಬರುವವರೆಗೂ ಖಾಸಗಿ ಡ್ರೋಣ್ ಬಳಕೆಗೆ ನಿರ್ಬಂದ ಹೇರಬೇಕು ಎಂದು ಸಿಎಂ ಗೆ ಪತ್ರ ಬರೆದಿರುವುದಾಗಿ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.