ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ತೀವ್ರ ಸಂಚಲನ ಮೂಡಿಸಿರುವ ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ...

ಬೆಂಗಳೂರು: ತೀವ್ರ ಸಂಚಲನ ಮೂಡಿಸಿರುವ ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ.
ಈ ಕುರಿತಂತೆ ಮಾತನಾಡಿರುವ ಡಿಜಿಪಿ ಓಂ ಪ್ರಕಾಶ್ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ನಿಷ್ಟಕ್ಷಪಾತವಾಗಿ ತನಿಖೆಯಾಗಬೇಕಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದ್ದು, ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳು ತನಿಖೆಗೆ ಮುಂದಾಗಲಿದ್ದಾರೆಂದು ಹೇಳಿದ್ದಾರೆ.
ಮಂಗಳೂರು ಕೊಡಗು ಮೂಲದ, ಮಂಗಳೂರು ಐಜಿ ಕಚೇರಿ ಡಿವೈಎಸ್ಪಿ ಎಂ.ಕೆ. ಗಣಪತಿ (45) ಅವರು ಗುರುವಾರ ಸಂಜೆ ಆತ್ಮಹತ್ಮೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಗಣಪತಿಯವರು ಖಾಸಗಿ ವಾಹನಿಯೊಂದಕ್ಕೆ ಸಂದರ್ಶನ ನೀಡಿದ್ದರು. ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಹೇಳಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


