ನಿಮ್ಮ ಅನುಮತಿಯಿಲ್ಲದೇ ಹೇಗೆ ಸಂದರ್ಶನ ನೀಡಿದರು: ಡಿಜಿಪಿ ವಿರುದ್ಧ ಸಿಎಂ ಕೆಂಡಾಮಂಡಲ
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಯಹತ್ಯೆಗೂ ಮುನ್ನ ಖಾಸಗಿ ಚಾನೆಲ್ ಗಳಿಗೆ ಸಂದರ್ಶನ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ..

ಬೆಂಗಳೂರು; ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಯಹತ್ಯೆಗೂ ಮುನ್ನ ಖಾಸಗಿ ಚಾನೆಲ್ ಗಳಿಗೆ ಸಂದರ್ಶನ ನೀಡಿರುವ ಸಂಬಂಧ ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಗಣಪತಿ ಅವರ ಆತ್ಮಹತ್ಯೆ ಸಂಬಂಧ ವಿವರಣೆ ನೀಡಲು ಸಿಎಂ ನಿವಾಸ ಕಾವೇರಿಗೆ ಓಂ ಪ್ರಕಾಶ್ ಆಗಮಿಸಿದ್ದರು. ಈ ವೇಳೆ ಡಿಜಿಪಿ ವಿರುದ್ಧ ಹರಿಹಾಯ್ದ ಸಿಎಂ ಗೃಹ ಸಚಿವ ಪರಮೇಶ್ವರ್ ವಿರುದ್ಧ ಹಿಗ್ಗಾಮುಗ್ಗ ಬೈಯ್ದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಡಿವೈಎಸ್‌ಪಿ ಗಣಪತಿಯವರು ಆತ್ಮಹತ್ಯೆಗೂ ಮುನ್ನ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡಿದ್ದಾರೆ. ಈ ಬಗ್ಗೆ ನಿಮಗೆ ಮಾಹಿತಿ ಇರಲಿಲ್ಲವೇ? ಇಷ್ಟಕ್ಕೂ ಅವರು ನಿಮ್ಮ ಅನುಮತಿ ಇಲ್ಲದೆ ಸಂದರ್ಶನ ನೀಡಿದ್ದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ಗಣಪತಿಯವರ ಮನಸ್ಥಿತಿ ತಿಳಿದುಕೊಳ್ಳಲು ನಿಮ್ಮಿಂದ ಸಾಧ್ಯವಾಗಲಿಲ್ಲವೇ? ಅವರ ಮನಸ್ಥಿತಿ ಅರಿಯುವ ಸಾಮರ್ಥ್ಯ ನಿಮಗಿಲ್ಲವೇ ಎಂದ ಮುಖ್ಯಮಂತ್ರಿಗಳು, ಅಧಿಕಾರಿಗಳ ವರ್ತನೆ ಮೇಲೆ ನಿಗಾ ಇರಿಸಬೇಕು. ಅವರ ಮನಸ್ಥಿತಿ ಅರಿತು ತತ್‌ಕ್ಷಣವೇ ಸಮಸ್ಯೆ ಪರಿಹಾರಿಸಲು ಮುಂದಾಗಬೇಕಿತ್ತು ಎಂದು ಗುಡುಗಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


