ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಎಂಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದ ಡಿಐಜಿ
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಡಿಐಜಿ ಓಂ ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಡಿಐಜಿ ಓಂ ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.
ನಗರದಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಈಗಾಗಲೇ ಭೇಟಿ ನೀಡಿರುವ ಡಿಐಜಿ ಓಂ ಪ್ರಕಾಶ್ ಅವರು, ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಅಲ್ಲದೆ, ಪ್ರಕರಣದ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಮಂಗಳೂರು ಕೊಡಗು ಮೂಲದ, ಮಂಗಳೂರು ಐಜಿ ಕಚೇರಿ ಡಿವೈಎಸ್ಪಿ ಎಂ.ಕೆ. ಗಣಪತಿ (45) ಅವರು ಗುರುವಾರ ಸಂಜೆ ಆತ್ಮಹತ್ಮೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಗಣಪತಿಯವರು ಖಾಸಗಿ ವಾಹನಿಯೊಂದಕ್ಕೆ ಸಂದರ್ಶನ ನೀಡಿದ್ದರು.
ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಹೇಳಿಕೊಂಡಿದ್ದರು ಅಲ್ಲದೆ, ಸಾವಿಗೂ ಮುನ್ನ ಡೆತ್ ನೋಟ್ ನ್ನು ಬರೆದಿಟ್ಟಿದ್ದರು. ಡೆತ್ ನೋಟ್ ನಲ್ಲಿರುವ ಅಂಶವನ್ನು ಬಹಿರಂಗಗೊಳಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಈ ಎಲ್ಲಾ ಅಂಶಗಳು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


