ರಾಜ್ಯ

ಹಾಸನದಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ 4 ಸಾವು

ಮಂಗಳೂರಿನಲ್ಲಿ ವೀಕೆಂಡ್ ಟ್ರಿಪ್ ಮಾಡಲು ಇನೋವಾ ಕಾರಿನಲ್ಲಿ ಹೊರಟ್ಟಿದ್ದವರ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಇನೋವಾ ಕಾರಿನಲ್ಲಿದ್ದ ಯುವತಿ...

ಹಾಸನದಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ 4 ಸಾವು
ಅಪಘಾತ
Published On :

ಹಾಸನ: ಮಂಗಳೂರಿನಲ್ಲಿ ವೀಕೆಂಡ್ ಟ್ರಿಪ್ ಮಾಡಲು ಇನೋವಾ ಕಾರಿನಲ್ಲಿ ಹೊರಟ್ಟಿದ್ದವರ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಇನೋವಾ ಕಾರಿನಲ್ಲಿದ್ದ ಯುವತಿ ಸೇರಿ ನಾಲ್ವರು ಸ್ಧಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನದ ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ 2.45ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಧಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರಲ್ಲಿ ಕಾರು ಚಾಲಕ ಬೆಂಗಳೂರಿನವನಾಗಿದ್ದು ಶಂಕರ್ ಎಂದು ಗುರುತಿಸಲಾಗಿದೆ. ಇನ್ನು ಮೂವರು ಮಧ್ಯಪ್ರದೇಶದವರು ಎಂದು ತಿಳಿದುಬಂದಿದೆ. ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹಾಸನ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ದೇಹವನ್ನು ಹಾಸನದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.