ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ಅನುಪಮಾ ಶೆಣೈ ಪ್ರತಿಕ್ರಿಯೆ ನೀಡಲು ನಿರಾಕರಣೆ
ಸರ್ಕಾರದ ವಿರುದ್ಧ ಸಿಡಿದೆದ್ದು, ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದ ಮಾಜಿ ಡಿವೈಎಸ್ಪಿ ಅನುಪಮಾ ಅವರು ಕಿರುಕುಳ ಪ್ರಕರಣ ಕುರಿತಂತೆ...

ಧಾರವಾಡ: ಸರ್ಕಾರದ ವಿರುದ್ಧ ಸಿಡಿದೆದ್ದು, ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದ ಮಾಜಿ ಡಿವೈಎಸ್ಪಿ ಅನುಪಮಾ ಅವರು ಕಿರುಕುಳ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಲು ಭಾನುವಾರ ನಿರಾಕರಿಸಿದ್ದಾರೆ.
ನಿನ್ನೆ ಧಾರವಾಡದಲ್ಲಿ ನಡೆಯುತ್ತಿದ್ದ ಜನಪರ್ಯಾಯ ಚಿಂತನ ಸಮಾರಂಭದಲ್ಲಿ ಅನುಪಮಾ ಶೆಣೈ ಅವರು ಹಾಜರಿದ್ದರು. ಈ ವೇಳೆ ಶೆಣೈ ಅವರನ್ನು ನೋಡಿದ ಮಾಧ್ಯಮದವರು ಪ್ರಕರಣದ ಕುರಿತಂತೆ ಪ್ರತಿಕ್ರಿಯೆ ಪಡೆಯಲು ಅವರ ಬಳಿ ತೆರಳಿದ್ದರು.
ಕೂಡಲೇ ಎದ್ದು ನಿಂತ ಶೆಣೈ ಅವರು, ಈಗಾಗಲೇ ಇಲಾಖೆಯನ್ನು ಬಿಟ್ಟಾಗಿದೆ. ಈ ಹಿಂದೆ ಏನೇ ಆಗಿದ್ದರೂ ಅದೆಲ್ಲ ಮುಗಿದ ಅಧ್ಯಾಯ ಎಂದರು.
ಮತ್ತೆ ಮಾಧ್ಯಮದವರು ಕೆಲ ಪ್ರಶ್ನೆಗಳನ್ನು ಕೇಳಲು ಆರಂಭಿಸಿದಾಗ, ಹೀಗೆ ಪ್ರಶ್ನೆ ಕೇಳುತ್ತಿದ್ದರೆ ಕಾರ್ಯಕ್ರಮ ಸ್ಥಳವನ್ನು ಬಿಟ್ಟು ತೊರೆಯುವುದಾಗಿ ಹೇಳಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


