ರಾಜ್ಯ

ನಾಪತ್ತೆಯಾಗಿರುವ ಮರೀಗೌಡ ಕಾರು ವಶಕ್ಕೆ ಪಡೆದ ಪೊಲೀಸರು

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ನಾಪತ್ತೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮರೀಗೌಡ ಅವರ ಕಾರನ್ನು ರಾಜ್ಯ ಪೊಲೀಸರು...

ನಾಪತ್ತೆಯಾಗಿರುವ ಮರೀಗೌಡ ಕಾರು ವಶಕ್ಕೆ ಪಡೆದ ಪೊಲೀಸರು
ಮರೀಗೌಡ ಹಾಗೂ ಜಿಲ್ಲಾಧಿಕಾರಿ ಸಿ. ಶಿಖಾ
Published On :

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ನಾಪತ್ತೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮರೀಗೌಡ ಅವರ ಕಾರನ್ನು ರಾಜ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎದುರಿಗಿರುವಾಗಲೇ ಮರೀಗೌಡ ಅವರು ಶಿಖಾ ಅವರಿದೆ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಲೇ ಮರೀಗೌಡ ಅವರು ನಾಪತ್ತೆಯಾಗಿದ್ದರು. ಈ ಬೆನ್ನಲ್ಲೇ ಮರೀಗೌಡ ಅವರಿಗೆ ಸೇರಿದೆ ಎನ್ನಲಾಗಿರುವ ಫಾರ್ಚೂನರ್ ಕಾರೊಂದನ್ನು ಮಂಡ್ಯದ ಎಂಜಿ ಬಡಾವಣೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮನೆಯ ಬಳಿ ಕಾರನ್ನು ನಿಲ್ಲಿಸಿದ್ದ ಮರೀಗೌಡ ಅವರು, ಎರಡು ದಿನಗಳ ನಂತರ ಕಾರನ್ನು ತೆಗೆದುಕೊಂಡು ಹೋಗುತ್ತೇನೆಂದು ಹೇಳಿದ್ದರು. ಆದರೆ, ಈ ವರೆಗೂ ಕಾರನ್ನು ತೆಗೆದುಕೊಂಡು ಹೋಗಿಲ್ಲ ಎಂದು ಸ್ನೇಹಿತ ಆನಂದ್ ಎಂಬುವವರು ಹೇಳಿಕೊಂಡಿದ್ದಾರೆ. ಮಾಧ್ಯಮಗಳು ನೀಡಿದ ವರದಿ ಆಧರಿಸಿ ನಜಾರ್ ಬಾದ್ ಠಾಣೆಯ ಪೊಲೀಸರು ಇದೀಗ ಕಾರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.