ಪ್ರಸಾದ್ ಬೆಂಬಲಿಗರಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಮೌನ ಪ್ರತಿಭಟನೆ
ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರ 4,000 ಅಧಿಕ ಬೆಂಬಲಿಗರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು...

ಮೈಸೂರು: ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರ 4,000 ಅಧಿಕ ಬೆಂಬಲಿಗರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀನಿವಾಸ ಪ್ರಸಾದ್ ಅವರನ್ನು ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರಸಾದ್ ಅವರ ಬೆಂಬಲಿಗರು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 'ಸಿಎಂ ಹಟಾವೋ-ಕಾಂಗ್ರೆಸ್ ಬಚಾವೋ' ಎಂಬ ಅಭಿಯಾನವೊಂದನ್ನು ಆರಂಭಿಸಿದ್ದಾರೆ.
ಪ್ರತಿಭಟನೆಯಲ್ಲಿ ದಲಿತ ಸಂಘಟನೆ, ಆದಿ ಕರ್ನಾಟಕ ಮಹಾಸಂಘ, ಪ್ರಗತಿಪರ ಸಂಘಟನೆಗಳು ಮತ್ತು ಶ್ರೀನಿವಾಸನ್ ಅಭಿಮಾನಿಗಳು ಕ್ಲಬ್ ನ ಸದಸ್ಯರು ಭಾಗಿಯಾಗಿದ್ದು, ಪ್ರತಿಭಟನೆ ವೇಳೆ ಬೆಂಬಲಿಗರು ಅಕ್ರಮ ಗಣಿಗಾರಿಕೆಯ ಬೆಂಬಲಿಗ, ವಿಶ್ವಾಸಘಾತುಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಂತೆ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿದ್ದಾರೆ. ಆದರೆ, ಯಾವುದೇ ರೀತಿಯ ಘೋಷಣೆಗಳನ್ನು ಕೂಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


