ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್...

Published On :
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಹೈಕೋರ್ಟ್ ಗೆ ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ.
ವಕೀಲ ರಂಗನಾಥ್ ರೆಡ್ಡಿ ಎಂಬುವವರು ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಪಿಐಎಲ್ ಸಲ್ಲಿಸಿದ್ದಾರೆ.
ಗಣಪತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಈ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆಗೆ ನಿರ್ದೇಶನ ನೀಡಬೇಕು ಎಂದು ರೆಡ್ಡಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


