ರಾಜ್ಯ

ಧಾರಾಕಾರ ಮಳೆ: ಆಲಮಟ್ಟಿ ಜಲಾಶಯದ ನೀರಿನ ಮಟ್ಟ 503 ಅಡಿ ಏರಿಕೆ

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಸುಮಾರು 503 ಅಡಿ ಯಷ್ಟು ..

ಧಾರಾಕಾರ ಮಳೆ: ಆಲಮಟ್ಟಿ ಜಲಾಶಯದ ನೀರಿನ ಮಟ್ಟ 503 ಅಡಿ ಏರಿಕೆ
ಆಲಮಟ್ಟಿ ಜಲಾಶಯ
Published On :

ವಿಜಯಾಪುರ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಸುಮಾರು 503 ಅಡಿ ನಷ್ಟು ಏರಿಕೆಯಾಗಿದೆ.

ಜಲಾಶಯದಲ್ಲಿ 1,27, 465 ಕ್ಯೂಸೆಕ್ಸ್ ನಷ್ಟು ಒಳಹರಿವು ಹೆಚ್ಚಿದ್ದು, ಹೊರ ಹರಿವು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಆಲಮಟ್ಟಿ ಜಲಾಯಶದ ಅಧಿಕಾರಿಗಳು ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಏರಿಕೆ ಮಹಾರಾಷ್ಟ್ರದ ಸಹ್ಯಾದ್ರಿ ಪ್ರದೇಶದಲ್ಲಿ ಉತ್ತಮ ಮಳೆಯ ಮೇಲೆ ಅವಲಂಬಿತವಾಗಿದೆ. ಮಹಾರಾಷ್ಟ್ರದ ಮಿರಜ್ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನೀರಿನ ಒಳಹರಿವು ಹೆಚ್ಚಿ ಜಲಾಶಯ ಮಟ್ಟ 508 ಅಡಿ ತಲುಪಿದೆ.

ಕೃಷ್ಣಾ ನದಿ ಮಿರಜ್ ಪಕ್ಕದ ರಾಜ್ ಪುರ ಅಣೆಕಟ್ಟಿಗೆ ಪ್ರವೇಶಿಸಿದೆ. ಈ ಅಣೆಕಟ್ಟಿನಿಂದ ಸುಮಾರು 1.5 ಲಕ್ಷ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ.

ಆಲಮಟ್ಟಿ ಜಲಾಶಯ 519.6 ಮೀಟರ್ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. ಕೋಯ್ನಾ,ವಾರಾನಾ ಮತ್ತು ಕೃಷ್ಣ, ದೂದ್ ಗಂಗಾ, ರಾಧಾನಗರಿ, ಕಸರಿ, ತುಳಸಿ, ಮತ್ತು ಪಾಥೋಗಾಮ್  ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕೊಲ್ಲಾಪುರ ಬಳಿಯಿರುವ ರಾಜಾರಾಂ ಅಣೆಕಟ್ಟಿನಿಂದ 60 ಸಾವಿರ ಕ್ಯೂಸೆಕ್ಸ್ ನೀರನ್ನು ಕರ್ನಾಟಕ ರಾಜ್ಯಕ್ಕೆ ಬಿಡಲಾಗಿದೆ ಎಂದು ಮಹಾರಾಷ್ಟ್ರ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.