ರಾಜ್ಯ

ಹಿರಿಯ ಅಧಿಕಾರಿಗಳ ಕಿರುಕುಳ: ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡ ಪೇದೆ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬೆಂಕಿ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ನೊಂದ ಪೇದೆಯೊಬ್ಬರು ಮಾಧ್ಯಮಗಳ ಮುಂದೆ...

ಹಿರಿಯ ಅಧಿಕಾರಿಗಳ ಕಿರುಕುಳ: ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡ ಪೇದೆ
ಪೇದೆ ಶರಣಪ್ರಕಾಶ್ ಎಸ್ ಪಾಟೀಲ್
Published On :

ಕಲಬುರ್ಗಿ: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬೆಂಕಿ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ  ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ನೊಂದ ಪೇದೆಯೊಬ್ಬರು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿರುವ ಘಟನೆ ನಡೆದಿದೆ.

ಕಲಬುರ್ಗಿಯ ಫರಿದಾಬಾದ್ ಪೊಲೀಸ್ ಠಾಣೆ ಪೇದೆ ಶರಣಪ್ರಕಾಶ್ ಎಸ್ ಪಾಟೀಲ್ ಅವರು ಹಿರಿಯ ಅಧಿಕಾರಿಯಾಗಿರುವ ಎಂಬಿ ನಗರ ವೃತ್ತದ ಪೊಲೀಸ್ ಇನ್ಸ್ ಪೆಕ್ಟರ್ ಜೆ.ಹೆಚ್.ಇನಾಮ್ದಾರ್ ಅವರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಈ ಕುರಿತಂತೆ ಖಾಸಗಿ ಮಾಧ್ಯವೊಂದರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿರುವ ಅವರು, ನನಗೇನಾದರೂ ಆದರೆ, ಇನಾಮ್ದಾರ್ ಅವರೇ ನೇರ ಹೊಣೆಯಾಗಿರುತ್ತಾರೆ. ಇನಾಮ್ದಾರ್ ಅವರು ನನಗೆ ಮಾನಸಿಕವಾಗಿ ಕಿರುಕುಳವನ್ನು ನೀಡುತ್ತಿದ್ದಾರೆಂದು ಹೇಳಿದ್ದಾರೆ. ಇದಲ್ಲದೆ, ಶರಣಪ್ರಕಾಶ್ ಅವರು ತಮ್ಮ ಫೇಸ್ ಬುಕ್ ನಲ್ಲೂ ಕೆಲ ಹೇಳಿಕೆಯನ್ನು ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ವ್ಯಕ್ತಿಯೊಬ್ಬನನ್ನು ಎನ್ಇಕೆಆರ್ ಟಿಸಿ ಬಸ್ ವೊಂದಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಡಿಸಲಾಗಿತ್ತು. ಶರಣಪ್ರಕಾಶ್ ಪಾಟೀಲ್ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ ಎಂದು ತನಿಖಾ ವರದಿಯೊಂದು ಹೇಳಿತ್ತು.

ಬಸ್ ಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಇನಾಮ್ದಾರ್ ಅವರು ತನಿಖೆ ನಡೆಸುತ್ತಿದ್ದರು. ಶರಣಪ್ರಕಾಶ್ ಅವರ ಬೇಜವಾಬ್ದಾರಿಯಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆಂದು ಹಿರಿಯ ಅಧಿಕಾರಿಗಳಿಗೆ ಇನಾಮ್ದಾರ್ ಅವರು ವರದಿ ನೀಡಿದ್ದರು. ವರದಿ ಆಧರಿಸಿ ಎಸ್ ಪಿ ಶಶಿಕುಮಾರ್ ಅವರು ಶರಣಪ್ರಕಾಶ್ ಅವರನ್ನು ವಾರದವರೆಗೆ ಅಮಾನತು ಶಿಕ್ಷೆ ನೀಡಿದ್ದರು.

ಶರಣಪ್ರಕಾಶ್ ಪಾಟೀಲ್ ಅವರು ಗಣಪತಿಯವರ ಹಾದಿಯನ್ನು ಹಿಡಿಯಲು ಯತ್ನಿಸಿ ಹಿರಿಯ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಸಲುವಾಗಿ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ ಮಾತುಕತೆಯನ್ನು ಈಗಾಗಲೇ ನಡೆಸಲಾಗಿದೆ. ಇನಾಮ್ದಾರ್ ಅವರೊಂದಿಗೂ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆಂದು ಶಶಿಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.