ಶ್ರೀರಂಗಪಟ್ಟಣ ಬಳಿ ಭೀಕರ ರಸ್ತೆ ಅಪಘಾತ: ಬಿಬಿಎಂಪಿ ಸದಸ್ಯ ಸೇರಿ ಮೂವರ ದುರ್ಮರಣ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರ ಗ್ರಾಮದ ಬಳಿ ಮೈಸೂರು -ಬೆಂಗಳೂರು ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾಲಿಕೆ ಸದಸ್ಯ .,..

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌರಿಪುರ ಗ್ರಾಮದ ಬಳಿ ಮೈಸೂರು -ಬೆಂಗಳೂರು ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾಲಿಕೆ ಸದಸ್ಯ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಎರಡು ಕಾರುಗಳ ನಡುವೆ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಕ್ಕಸಂದ್ರ ವಾರ್ಡ್‌ನ ಬಿಬಿಎಂಪಿ ಸದಸ್ಯ ಮಹೇಶ್ ಬಾಬು(40) ,ಮಿದಾ ಶರೀಫ್ (45),ಬಾಲಾಜಿ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಶ್ರೀರಂಗಪಟ್ಟಣ ಡಿವೈಎಪಿ ಸೇರಿದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ ವಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನವು ಮಾಡಿಕೊಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


