ಗಣಪತಿ ಆತ್ಮಹತ್ಯೆ ಪ್ರಕರಣ ಸಂಸತ್ತಿನಲ್ಲಿ ಪ್ರಸ್ತಾಪ: ಸಂಸದ ಯಡಿಯೂರಪ್ಪ
ಸೋಮವಾರದಿಂದ ಆರಂಭಗೊಂಡಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯದ ಡಿವೈಎಸ್ಪಿ ಎಂ.ಕೆ.ಗಣಪತಿ...

Published On :
ಬೆಂಗಳೂರು: ಸೋಮವಾರದಿಂದ ಆರಂಭಗೊಂಡಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ರಾಜ್ಯದ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಪ್ರಸ್ತಾಪವಾಗಲಿದೆ.
ಸಂಸತ್ ಅಧಿವೇಶನದಲ್ಲಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಚರ್ಚಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ಆತ್ಮಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ತನ್ನ ಹೋರಾಟ ತೀವ್ರಗೊಳಿಸಲಿದೆ. ಸಂಸತ್ತಿನಲ್ಲಿ ಈ ವಿಷಯ ಮಂಡನೆಗೆ ಅವಕಾಶ ಕೋರುವ ಸಂಬಂಧ ಕೇಂದ್ರ ಸಚಿವರಾದ ಅನಂತಕುಮಾರ್ ಮತ್ತು ಸದಾನಂದಗೌಡ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಲೋಕಸಭೆಯ ಸ್ಪೀಕರ್ ಜತೆ ಮಾತನಾಡಿ ಪ್ರಸ್ತಾಪಕ್ಕೆ ಅನುಮತಿ ಕೋರಲಾಗುವುದು ಎಂದರು.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬುದರ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೂ ಮನವಿ ಮಾಡಲಾಗುವುದು. ಅಲ್ಲದೆ, ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸುವಂತೆ ಕೋರಿ ಶೀಘ್ರದಲ್ಲೇ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


