ಚಾರ್ಮಾಡಿಘಾಟ್: ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಇಬ್ಬರು ಸಾವು
ಚಾರ್ಮಾಡಿಘಾಟ್ ನ ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ಪ್ರವಾಸಿಗರು ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ...

Published On :
ಚಿಕ್ಕಮಗಳೂರು: ಚಾರ್ಮಾಡಿಘಾಟ್ ನ ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಇಬ್ಬರು ಪ್ರವಾಸಿಗರು ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹನುಮಂತಪ್ಪ ಹಾಗೂ ನಾಗಭೂಷಣ್ ಎಂದು ಗುರುತಿಸಲಾಗಿದೆ. ಮೃತರು ತಮ್ಮ ಸ್ನೇಹಿತರೊಂದಿಗೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಕಡೆ ಪ್ರವಾಸ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಮೃತರಿಬ್ಬರು ಅಲಿಖಾನ್ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಇನ್ನು ಕೆಲ ತಿಂಗಳ ಹಿಂದಷ್ಟೇ ಮೂಡಿಗೆರೆ ತಾಲೂಕಿನ ಯುವಕನೊಬ್ಬ ಇದೇ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಬಿದ್ದು ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


