ಠಾಣೆಯಲ್ಲೇ ರೈತ ಸಾವು: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ
ವಿಚಾರಣೆ ವೇಳೆ ರೈತನೊಬ್ಬ ಪೊಲೀಸ್ ಠಾಣೆಯಲ್ಲಿ ಮೃತಪಟ್ಟಿರುವ ಘಟನೆಯೊಂದು ಚಿಕ್ಕಬಳ್ಳಾಪುರದಲ್ಲಿ ಸೋಮವಾರ ನಡೆದಿದೆ...

ಚಿಕ್ಕಬಳ್ಳಾಪುರ: ವಿಚಾರಣೆ ವೇಳೆ ರೈತನೊಬ್ಬ ಪೊಲೀಸ್ ಠಾಣೆಯಲ್ಲಿ ಮೃತಪಟ್ಟಿರುವ ಘಟನೆಯೊಂದು ಚಿಕ್ಕಬಳ್ಳಾಪುರದಲ್ಲಿ ಸೋಮವಾರ ನಡೆದಿದೆ.
ರೂಪೇಶ್ (45) ಮೃತ ರೈತ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಂತರ ಪೊಲೀಸರು ಹೊಸ ಹುಡ್ಯ ಗ್ರಾಮದ ರೈತ ರೂಪೇಶ್ ಎಂಬುವವರನ್ನು ಠಾಣೆಗೆ ಕರೆಸಿದ್ದರು. ಇದರಂತೆ ವಿಚಾರಣೆ ನಡೆಸುತ್ತಿದ್ದ ವೇಳೆ ರೈತ ಇದ್ದಕ್ಕಿದ್ದಂತೆ ಎದೆ ನೋವು ಎಂದು ಹೇಳಿ ಕುಸಿದುಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ, ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ಪೊಲೀಸರು ಹೇಳಿಕೊಂಡಿದ್ದಾರೆ.
ಇದರಂತೆ ರೂಪೇಶ್ ಸಾವಿಗೆ ಪೊಲೀಸರೇ ಕಾರಣ ಎಂದು ಕುಟುಂಬಸ್ಥರು ಆರೋಪ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಇದರಂತೆ ಗ್ರಾಮಸ್ಥರೂ ಕೂಡ ಪ್ರತಿಭಟನೆಗೆ ಸಾಥ್ ನೀಡಿದ್ದರು. ಕೆಲ ಗಂಟೆಗಳ ನಂತರ ಪ್ರತಿಭಟನೆ ತೀವ್ರಗೊಂಡಿದೆ ಹೀಗಾಗಿ ಪ್ರತಿಭಟನಾ ನಿರತರನ್ನು ಚದುರಿಸಲುವ ಸಲುವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಂತೆ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣವನ್ನು ನಿರ್ಮಾಣವಾಗಿದೆ.
ರೂಪೇಶ್ ಅವರ ಪತ್ನಿ ಪುಷ್ಪ ಹಾಗೂ ಇನ್ನಿತರೆ ಸಂಬಂಧಿಕರು ಮಾತನಾಡಿ, ರೂಪೇಶ್ ಸಾವಿಗೆ ಪೊಲೀಸರ ಕಾರಣವಾಗಿದ್ದಾರೆ. ಜಮೀನು ವಿಚಾರವಾದಿ ಪೊಲೀಸು ರೂಪೇಶ್ ಗೆ ಕಿರುಕುಳ ನೀಡುತ್ತಿದ್ದರು. ಪ್ರಶ್ನೆಗಳನ್ನು ಕೇಳುವ ಮುಖಾಂತರ ಅವರ ಮೇಲೆ ಒತ್ತಡವನ್ನು ಹೇರಿದ್ದಾರೆ. ಇದರಿಂದ ಅವರಿಗೆ ಹೃದಯ ಸ್ತಂಭನ ಎದುರಾಗಿದೆ ಎಂದು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರು, ರೂಪೇಶ್ ಸಾವು ಪ್ರಕರಣ ಕುರಿತಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಈಗಾಗಲೇ ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಅವರನ್ನು ಅಮಾನತು ಕೂಡ ಮಾಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


