ಕಲಬುರಗಿ ಕೇಂದ್ರೀಯ ವಿವಿ ಬಳಿ ಭೀಕರ ಅಪಘಾತ, 8 ಮಂದಿ ಸಾವು
ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಡೋಗಿನಾಲಾ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಲಾರಿಯೊಂದು ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ರೂಸರ್...

Published On :
ಕಲಬುರಗಿ: ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಡೋಗಿನಾಲಾ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಲಾರಿಯೊಂದು ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಕ್ರೂಸರ್ ನಲ್ಲಿದ್ದ 8 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಮಹಾರಾಷ್ಟ್ರದ ಕಣಗರಾದಿಂದ ಗಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಈ ಭೀಕರ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


