ಜನದಟ್ಟಣೆ ಸಮಯದಲ್ಲಿ 6 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ
ದಿನೇ ದಿನೇ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮೆಟ್ರೋ ರೈಲು ಪ್ರಾಧಿಕಾರ ರೈಲುಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಬುಧವಾರದಿಂದ ಪ್ರತೀ 6 ನಿಮಿಷಕ್ಕೆ ಒಂದು ರೈಲು ಓಡಿಸಲು ನಿರ್ಧರಿಸಿದೆ.

ಬೆಂಗಳೂರು: ದಿನೇ ದಿನೇ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಮೆಟ್ರೋ ರೈಲು ಪ್ರಾಧಿಕಾರ ರೈಲುಗಳ ಸಂಖ್ಯೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಬುಧವಾರದಿಂದ ಪ್ರತೀ 6 ನಿಮಿಷಕ್ಕೆ ಒಂದು ರೈಲು ಓಡಿಸಲು ನಿರ್ಧರಿಸಿದೆ.
ಪ್ರಮುಖವಾಗಿ ಜನದಟ್ಟಣೆ ಸಮಯದಲ್ಲಿ ಹೆಚ್ಚೆಚ್ಚು ರೈಲು ಓಡಿಸಲು ಪ್ರಾಧಿಕಾರ ನಿರ್ಧರಿಸಿದ್ದು, ಪ್ರಸ್ತುತ ಅತೀ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿರುವ ಪೂರ್ವ-ಪಶ್ಚಿಮ ಕಾರಿಡಾರ್ ನಲ್ಲಿ ಹೆಚ್ಚೆಚ್ಚು ರೈಲು ಓಡಿಸಲು ನಿರ್ಧರಿಸಲಾಗಿದೆ. ಹೀಗಾಗಿ ಬೆಳಗ್ಗೆ ಹಾಗೂ ಸಂಜೆಯ ಜನದಟ್ಟಣೆ ಸಮಯದಲ್ಲಿ ಮೆಟ್ರೋ ರೈಲು ಸಂಚಾರ ಸಮಯದ ಅಂತರವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಇಳಿಸಿದ್ದು, ಬೈಯಪ್ಪನಹಳ್ಳಿ ಕಡೆಯಿಂದ ಬೆಳಗ್ಗೆ 7.46ರಿಂದ 9.10ರವರೆಗೆ ಹಾಗೂ ಸಂಜೆ 5ರಿಂದ 7.54ರವರೆಗೆ ಪ್ರತಿ 6 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ. ಅದೇ ರೀತಿ ಮೈಸೂರು ರಸ್ತೆಯಿಂದ ಬೆಳಗ್ಗೆ 8.22ರಿಂದ 9.52ವರೆಗೆ ಹಾಗೂ ಸಂಜೆ 5.48 ರಿಂದ 8.37ರವರೆಗೆ ಪ್ರತಿ 6 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಈ ಮಾರ್ಗದಲ್ಲಿ ಇದೇ ಸಮಯದಲ್ಲಿ ಪ್ರತಿ 8 ನಿಮಿಷಕ್ಕೊಮ್ಮೆ ರೈಲು ಸಂಚಾರ ನಡೆಯುತ್ತಿತ್ತು. ಬೆಳಗ್ಗೆ 6 ರಿಂದ 7.15ರವರೆಗೆ ಹಾಗೂ ವಾರಾಂತ್ಯದಲ್ಲಿ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಎಂಡಿ ಪ್ರದೀಪ್ ಸಿಂಗ್ ಖರೋಲಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


