ಗಣಪತಿ ಆತ್ಮಹತ್ಯೆ ಪ್ರಕರಣದ 3ನೇ ಆರೋಪಿ ಎ.ಎಂ.ಪ್ರಸಾದ್ ಗೆ ಹೊಸ ಹುದ್ದೆ ಸೃಷ್ಟಿಸಿದ ಸರ್ಕಾರ
ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿ ಎ.ಎಂ.ಪ್ರಸಾದ್ ಅವರಿಗೆಗಾಗಿ ರಾಜ್ಯ ಸರ್ಕಾರ...

Published On :
ಬೆಂಗಳೂರು: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಮೂರನೇ ಆರೋಪಿ ಎ.ಎಂ.ಪ್ರಸಾದ್ ಅವರಿಗೆಗಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸಮಾನವಾದ ಹೊಸ ಹುದ್ದೆಯೊಂದನ್ನು ಸೃಷ್ಟಿ ಮಾಡಿದೆ.
ರಾಜ್ಯ ಗುಪ್ತದಳದ ಮುಖ್ಯಸ್ಥರಾಗಿದ್ದ ಎ.ಎಂ.ಪ್ರಸಾದ್ ಅವರನ್ನು ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಬೆಂಗಳೂರು ನಗರ ಸಂಚಾರ ವಿಭಾಗ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಈ ಹಿಂದೆ ಇದ್ದ ಸಂಚಾರ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಹುದ್ದೆಯನ್ನು ರದ್ದುಪಡಿಸಿ, ಪ್ರಸಾದ್ ಗಾಗಿ ಸಂಚಾರ ವಿಭಾಗ ಪೊಲೀಸ್ ಆಯುಕ್ತ ಹುದ್ದೆಯನ್ನು ಸೃಷ್ಟಿಸಲಾಗಿದೆ.
ಇನ್ನು ಗಣಪತಿ ಪ್ರಕರಣದ ಎರಡನೇ ಆರೋಪಿ ಲೋಕಾಯುಕ್ತ ಎಡಿಜಿಪಿಯಾಗಿದ್ದ ಪ್ರೊಣವ್ ಮೊಹಾಂತಿ ಅವರು ಕೇಂದ್ರ ಸೇವೆಗೆ ನಿಯುಕ್ತಿಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruವರ್ಗಾವಣೆtransferredAM PrasadTraffic Police Comissionerಎ.ಎಂ.ಪ್ರಸಾದ್ಸಂಚಾರಿ ಪೊಲೀಸ್ ಆಯುಕ್ತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


